ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರಾಕಾರ ಮಳೆ ಸಾಧ್ಯತೆ: 12 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’

Last Updated 12 ಅಕ್ಟೋಬರ್ 2020, 19:31 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವ ಕಾರಣ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಅ.13ರಿಂದ 15ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ತುಮಕೂರು, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಗದಗ, ಬೆಳಗಾವಿಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಮಳೆ-ಎಲ್ಲಿ,ಎಷ್ಟು?: ಹುಕ್ಕೇರಿಯಲ್ಲಿ ಗರಿಷ್ಠ 13 ಸೆಂ.ಮೀ ಮಳೆಯಾಗಿದೆ. ಹುನಗುಂದ 10, ಯಲಬುರ್ಗಾ 6, ಭಟ್ಕಳ, ಅಥಣಿ, ಸಂಕೇಶ್ವರ, ಗದಗ, ನರಗುಂದ, ಹೊಸಪೇಟೆ, ಕಂಪ್ಲಿ 4, ಮಂಗಳೂರು, ರಾಮದುರ್ಗದಲ್ಲಿ ತಲಾ 3 ಸೆಂ.ಮೀ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT