ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ ತಕ್ಷಣ ತೆಗೆದುಕೊಂಡಿದ್ದ ನಿರ್ಧಾರದಂತೆ ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ ನೀಡುವ ಯೋಜನೆ ಜಾರಿಗೆ ಕೃಷಿ ಇಲಾಖೆ ಶನಿವಾರ ಆದೇಶ ಹೊರಡಿಸಿದೆ. ಇದಕ್ಕಾಗಿ ₹ 1,000 ಕೋಟಿಯನ್ನು ವೆಚ್ಚ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.

ಸಾಗುವಳಿ ಮಾಡುತ್ತಿರುವ ಕೃಷಿ ಜಮೀನು ಹೊಂದಿರುವ ರೈತರ ಕುಟುಂಬದ ಮಕ್ಕಳಿಗೆ ಈ ಯೋಜನೆ
ಯಡಿ ವಿಶೇಷ ಶಿಷ್ಯವೇತನ ನೀಡಲಾಗುತ್ತದೆ. ರಾಜ್ಯದ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ರೈತ ಕುಟುಂಬದ ವಿದ್ಯಾರ್ಥಿಗಳು ಈ ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ.

ಪಿಯುಸಿ, ಐಟಿಐ ಅಥವಾ ತತ್ಸಮಾನ ತರಗತಿಗಳಲ್ಲಿ ಓದುತ್ತಿರುವ ಬಾಲಕರಿಗೆ ₹ 2,500 ಮತ್ತು ಬಾಲಕಿಯರಿಗೆ ತಲಾ ₹ 3,000 ಶಿಷ್ಯವೇತನ ದೊರಕಲಿದೆ. ಪದವಿ, ಎಂಬಿಬಿಎಸ್, ಎಂಜಿನಿಯರಿಂಗ್ ಪದವಿ ಹಾಗೂ ಪದವಿಗೆ ಸಮನಾದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ತಲಾ ₹ 5,000 ಮತ್ತು ವಿದ್ಯಾರ್ಥಿನಿಯರಿಗೆ ತಲಾ ₹ 5,500 ಶಿಷ್ಯವೇತನ ಪ್ರಕಟಿಸಲಾಗಿದೆ.

ಕಾನೂನು ಪದವಿ, ಅರೆ ವೈದ್ಯಕೀಯ, ಬಿ. ಫಾರ್ಮಾ, ನರ್ಸಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್
ಗಳ ವಿದ್ಯಾರ್ಥಿಗಳಿಗೆ ₹ 7,500 ಮತ್ತು ವಿದ್ಯಾರ್ಥಿನಿಯರಿಗೆ ₹ 8,000 ಶಿಷ್ಯವೇತನ ನೀಡಲಾಗುತ್ತದೆ. ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ಸ್ನಾತಕೋತ್ತರ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ₹ 10,000, ವಿದ್ಯಾರ್ಥಿನಿಯರಿಗೆ ₹ 11,000 ಶಿಷ್ಯವೇತನ ಘೋಷಿಸಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರು ಸಾಗುವಳಿ ಮಾಡುತ್ತಿರುವ ಕೃಷಿ ಜಮೀನು ಹೊಂದಿರಬೇಕು. ಪೋಷಕರು ಇಲ್ಲವಾದಲ್ಲಿ, ವಿದ್ಯಾರ್ಥಿಗಳ ಹೆಸರಿನಲ್ಲಿ ಕೃಷಿ ಜಮೀನು ಇರಬೇಕು. ಈ ಯೋಜನೆಯಡಿ ಒಬ್ಬ ವಿದ್ಯಾರ್ಥಿ ಒಮ್ಮೆ ಮಾತ್ರ ಶಿಷ್ಯವೇತನ ಪಡೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಅನುದಾನದಲ್ಲಿ ನೀಡುವ ಇತರೆ ಸಾಮಾನ್ಯ ಶಿಷ್ಯವೇತನಗಳನ್ನು ಯೋಜನೆಯ ಫಲಾನುಭವಿಗಳು ಆ ಅವಧಿಯಲ್ಲಿ ಪಡೆಯುವಂತಿಲ್ಲ. ಮೆರಿಟ್, ಅರ್ಹತಾ ಪರೀಕ್ಷೆ, ರ್ಯಾಂಕ್ ಆಧಾರದಲ್ಲಿ ನೀಡುವ ಶಿಷ್ಯವೇತನ ಅಥವಾ ಪ್ರಶಸ್ತಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಒಂದು ಸೆಮಿಸ್ಟರ್ ಅತವಾ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡು, ಪುನಃ ಪರೀಕ್ಷೆ ಎದುರಿಸಿದವರು ಈ ಶಿಷ್ಯವೇತನಕ್ಕೆ ಅರ್ಹರಾಗುವುದಿಲ್ಲ ಎಂದು ಷರತ್ತು ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.