ಬೆಂಗಳೂರು: ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ವಿವಾದಗಳ ಕಾಯ್ದೆಗಳ ತಿದ್ದುಪಡಿ ಜಾರಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆಗಳ ತಿದ್ದುಪಡಿ ಜಾರಿಗೊಳಿಸಿ ನಾಲ್ಕು ತಿಂಗಳ ಹಿಂದೆ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಆದರೆ, ಈ ತಿದ್ದುಪಡಿ ಮಸೂದೆಗಳಿಗೆ ವಿಧಾನಸಭೆಯಲ್ಲಿ ಮಾತ್ರ ಅಂಗೀಕಾರ ದೊರಕಿತ್ತು. ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಬಾಕಿ ಇದೆ. ಕಾರ್ಮಿಕ ವಿವಾದಗಳು ಮತ್ತು ಇತರ ಕೆಲವು ಕಾನೂನುಗಳ (ಕರ್ನಾಟಕ ತಿದ್ದುಪಡಿ) ಮಸೂದೆ ವಿಧಾನ ಪರಿಷತ್ತಿನಲ್ಲಿ ಮತ ವಿಭಜನೆಯಲ್ಲಿ ತಿರಸ್ಕೃತಗೊಂಡಿದೆ. ಭೂಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಪರ್ಯಾಲೋಚನೆಗೆ ತೆಗೆದುಕೊಂಡು ಅರ್ಧದಲ್ಲೇ ಕಲಾಪವನ್ನು ಮುಂದೂಡಲಾಯಿತು. ಎಪಿಎಂಸಿ ಕಾಯ್ದೆಯನ್ನು ಪರ್ಯಾಲೋಚನೆಗೆ ತೆಗೆದುಕೊಳ್ಳಲೇ ಇಲ್ಲ.

ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿಯನ್ನು ಜಾರಿಯಲ್ಲಿಡಲು ಮತ್ತು ಕಾರ್ಮಿಕ ಕಾಯ್ದೆಯ ತಿದ್ದುಪಡಿ ಜಾರಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸುವಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುಗ್ರೀವಾಜ್ಞೆಗಳಿಗೆ ಒಪ್ಪಿಗೆ ಪಡೆಯಲು ರಾಜ್ಯಪಾಲರಿಗೆ ಕಳುಹಿಸಲಾಗುವುದು. ಮುಂದಿನ ಆರು ತಿಂಗಳವರೆಗೆ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಯಲ್ಲಿ ಇರಲಿದೆ. ಅಷ್ಟರೊಳಗೆ ಸರ್ಕಾರ ಮತ್ತೊಮ್ಮೆ ಅಧಿವೇಶನ ಕರೆದು ಒಪ್ಪಿಗೆ ಪಡೆದುಕೊಳ್ಳಬೇಕು. ಆಗಲೂ ಒಂದು ವೇಳೆ ಮೇಲ್ಮನೆಯಲ್ಲಿ ಮಸೂದೆಗಳಿಗೆ ಸೋಲುಂಟಾದರೆ, ಅವುಗಳನ್ನು ವಿಧಾನಸಭೆ ಕಲಾಪ ಚಾಲ್ತಿಯಲ್ಲಿರುವಾಗಲೇ ಮಂಡಿಸಿ, ಒಪ್ಪಿಗೆ ಪಡೆದು ಕಾಯಂ ಆಗಿ ಕಾಯ್ದೆ ಜಾರಿಗೆ ತರಬಹುದು ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

* ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು–2020 ಒಪ್ಪಿಗೆ ಸಿಕ್ಕಿದೆ.

* ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಪೊಲೀಸ್ ಕಾನ್ಸ್ಟೆಬಲ್, ಸಬ್ ಇನ್ಸ್ಪೆಕ್ಟರ್ ಮತ್ತು ಡಿವೈಎಸ್ಪಿ ಹುದ್ದೆಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ನೇರ ನೇಮಕಾತಿ) ವಿಶೇಷ ನಿಯಮಗಳು– 2020 ಕ್ಕೂ ಅನುಮತಿ ಸಿಕ್ಕಿದೆ.

ಐಟಿಐಗಳ ಮೇಲ್ದರ್ಜೆಗಾಗಿ ₹4,636 ಕೋಟಿ

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಜತೆ ಸೇರಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದಕ್ಕಾಗಿ ₹4,636.50 ಕೋಟಿ ವೆಚ್ಚ ಮಾಡಲಾಗುವುದು.ಒಟ್ಟು 150 ಸರ್ಕಾರಿ ಐಟಿಐಗಳಲ್ಲಿ ಟಾಟಾ ಟೆಕ್ನಾಲಜೀಸ್ ಸಂಸ್ಥೆಯು ಇಂದಿನ ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ಮಾನವ ಸಂಪನ್ಮೂಲವನ್ನು ರೂಪಿಸಲಿದೆ. ಇದಕ್ಕಾಗಿ ಡಿಜಿಟಲ್ ವೇದಿಕೆಯನ್ನೂ ಬಳಸಿಕೊಳ್ಳಲಿದೆ. ಈ ಯೋಜನೆಯ ವ್ಯಾಪ್ತಿಗೆ ಒಳಪಡುವ ಐಟಿಐಗಳನ್ನು ಮೇಲ್ದರ್ಜೆಗೇರಿಸಲು ತಲಾ ₹30.91 ಕೋಟಿ ವೆಚ್ಚ ಮಾಡಲಾಗುವುದು. ಇದರಲ್ಲಿ ಟಾಟಾದವರು ₹27.20 ಕೋಟಿ ಮತ್ತು ರಾಜ್ಯ ಸರ್ಕಾರ ₹3.71 ಕೋಟಿ ವೆಚ್ಚ ಭರಿಸಲಿದೆ. ಟಾಟಾ ಸಂಸ್ಥೆ ಒಟ್ಟು ₹4,080 ಕೋಟಿ ಈ ಯೋಜನೆಗೆ ನೀಡಲಿದೆ. ಟಾಟಾ ಸಂಸ್ಥೆ 5 ವರ್ಷ ಉಚಿತವಾಗಿ ನಿರ್ವಹಣೆ ಮಾಡಲಿದ್ದು, ಪ್ರತಿ ಎರಡು ವರ್ಷಗಳಿಗೆ 300 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.