ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಉದ್ಯಮ ವಿಸ್ತರಣೆ ನಮ್ಮ ಗುರಿ: ಬಸವರಾಜ ಬೊಮ್ಮಾಯಿ

ಸಿಐಐ ವಾರ್ಷಿಕ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Last Updated 11 ಆಗಸ್ಟ್ 2021, 19:23 IST
ಅಕ್ಷರ ಗಾತ್ರ

ಬೆಂಗಳೂರು: 'ರಾಜ್ಯದಾದ್ಯಂತ ಉದ್ಯಮ ಸ್ಥಾಪನೆ ಮತ್ತು ವಿಸ್ತರಣೆ ಸರ್ಕಾರದ ಗುರಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ಸಭೆ "ಇಂಡಿಯಾ @75"ನಲ್ಲಿ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ ಅವರು, ‘ಕರ್ನಾಟಕ ಕೈಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಸ್ವಾತಂತ್ರ್ಯಾ ನಂತರದಲ್ಲಿ ಕೌಶಲ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವಿದೇಶಿ ಸಹಯೋಗಕ್ಕೆ ಅತ್ಯಂತ ಭದ್ರ ಬುನಾದಿ ಹಾಕಲಾಗಿದೆ. ಇಡೀ ರಾಜ್ಯದಲ್ಲಿ ಉದ್ಯಮಶೀಲತೆ ವಿಸ್ತರಿಸುವುದು ನಮ್ಮ ಆದ್ಯತೆ’ ಎಂದರು.

‘ರಾಜ್ಯವನ್ನು ಬೆಳವಣಿಗೆಯತ್ತ ಕೊಂಡೊಯ್ಯಲು ಸಂಪನ್ಮೂಲಗಳನ್ನು ಶಕ್ತಿಯನ್ನಾಗಿ ಪರಿವರ್ತಿಸಲಾಗುವುದು. ವ್ಯವಸ್ಥೆಗಿಂತ ರಾಜ್ಯದ ಜನರು ಶ್ರೀಮಂತವಾಗಿರಬೇಕು ಎನ್ನುವುದು ನನ್ನ ಆಶಯ. ಮಾನವ ಸಂಪನ್ಮೂಲವನ್ನು ಸಶಕ್ತಗೊಳಿಸುವ ಜೊತೆಗೆ, ಪ್ರಾದೇಶಿಕ ಅಸಮಾನತೆಯ ನಿವಾರಣೆಗೂ ಒತ್ತು ನೀಡಲಾಗುವುದು’ ಎಂದು ಬೊಮ್ಮಾಯಿ ತಿಳಿಸಿದರು.

‘ರಫ್ತು ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿರಬೇಕು. ಅದಕ್ಕಾಗಿ ಉತ್ತಮ ಗುಣಮಟ್ಟದ ರಫ್ತು ಕೇಂದ್ರಿತ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಬೇಕು. ನೂತನ ಕೈಗಾರಿಕಾ ನೀತಿ, ಕಾಯ್ದೆಗಳನ್ನು ಸರಳೀಕರಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಹೊರತಾಗಿಯೂ ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ’ ಎಂದ ಅವರು, ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಹೂಡಿಕೆ ಮಾಡುವಂತೆ ವಿವಿಧ ಕಂಪನಿಗಳಿಗೆ ಆಹ್ವಾನ ನೀಡಿದರು.

ಸಿಐಐ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ, ಉದ್ಯಮಿಗಳಾದ ಅಜೀಂ ಪ್ರೇಮ್ ಜಿ, ಕಿರಣ್ ಮಜುಂದಾರ್ ಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT