ಗುರುವಾರ , ಜೂನ್ 30, 2022
27 °C

ಹೊರ ಗುತ್ತಿಗೆ: ಶೇ 33ರಷ್ಟು ನೌಕರಿ ಮಹಿಳೆಯರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಸರ್ಕಾರಿ ವಲಯದ ಅಂಗ ಸಂಸ್ಥೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೌಕರರನ್ನು ನೇಮಿಸುವಾಗ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಗುರುವಾರ ಸುತ್ತೋಲೆ ಹೊರಡಿಸಿದ್ದಾರೆ.

ಡೇಟಾ ಎಂಟ್ರಿ ಆಪರೇಟರ್‌ ಮತ್ತು ‘ಡಿ’ ದರ್ಜೆ ನೌಕರರ ಹೊರಗುತ್ತಿಗೆ ನೇಮಕಾತಿಗೆ ಸಂಬಂಧಿಸಿದ ಟೆಂಡರ್‌
ಮತ್ತು ಗುತ್ತಿಗೆದಾರರ ಜತೆಗಿನ ಒಪ್ಪಂದದ ಷರತ್ತುಗಳಲ್ಲಿ ಶೇ 33ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ನೀಡಬೇಕೆಂಬ ಅಂಶ ಸೇರಿಸಬೇಕು. ಎಲ್ಲ ಇಲಾಖೆಗಳ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳು, ಅಂಗ ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲೂ ಮಹಿಳಾ ಮೀಸಲಾತಿ ಜಾರಿಗೊಳಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು