ಬೆಂಗಳೂರು: ಬೇಡಿಕೆಗೆ ಅನುಸಾರವಾಗಿ ಆಮ್ಲಜನಕವನ್ನು ಆಸ್ಪತ್ರೆಗಳಿಗೆ ಪೂರೈಕೆ ಮಾಡಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರು ಆಮ್ಲಜನಕ ತಯಾರಕರಿಗೆಸೂಚಿಸಿದ್ದಾರೆ.

ಗಂಭೀರವಾಗಿ ಅಸ್ವಸ್ಥರಾಗಿರುವ ಸೋಂಕಿತರನ್ನು ಅಪಾಯದಿಂದ ಪಾರು ಮಾಡಲು ಆಮ್ಲಜನಕದ ಅಗತ್ಯವಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ನಿಗದಿತ ಪ್ರಮಾಣದಲ್ಲಿ ಆಮ್ಲಜನಕದ ಸರಬರಾಜು ಆಗಬೇಕು. ಆದರೆ, ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಮರುಪೂರಣ ಘಟಕಗಳಿಗೆ ಆಮ್ಲಜನಕವನ್ನು ಸರಬರಾಜು ಮಾಡುವಲ್ಲಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದೆ. ಇಲ್ಲಿ ಕಾನೂನಿನ ಉಲ್ಲಂಘನೆ ಕೂಡ ನಡೆದಿದೆ. ಒಪ್ಪಂದದ ಅನುಸಾರ ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸಿ, ಪೂರೈಕೆ ಮಾಡಬೇಕು ಎಂದು ನಿರ್ದೇಶಿಸಿದ್ದಾರೆ.

ಎಲ್ಲ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಮರುಪೂರಣ ಘಟಕಗಳ ಮುಖ್ಯಸ್ಥರು ಆಮ್ಲಜನಕದ ಕೊರತೆಗೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲು ಸಹಾಯಕ ಔಷಧ ನಿಯಂತ್ರಕರನ್ನು ಸಂಪರ್ಕಿಸಬೇಕು. ಅವರ ವಿವರಗಳು drugs.kar.nic.in ನಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.