ಗುರುವಾರ , ಜೂನ್ 24, 2021
29 °C

ಪಾದರಾಯನಪುರ ಗಲಾಟೆ: ಚಿಂತಾಮಣಿಯಲ್ಲಿ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ಯೋಧರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಸೈಯದ್ ಪರ್ವೇಜ್ ಪಾಷ, ಚಿಂತಾಮಣಿಯಲ್ಲಿ ಮಂಗಳವಾರ ಸಿಕ್ಕಿಬಿದ್ದಿದ್ದಾನೆ.

ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ವೈದ್ಯರು ಹಾಗೂ ಪೊಲೀಸರು ಪಾದರಾಯನಪುರಕ್ಕೆ ಹೋದಾಗ ಗಲಾಟೆ ಆಗಿತ್ತು. ಆ ‍ಪ್ರಕರಣದಲ್ಲಿ 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿತ್ತು.

‘ಆರೋಪಿ ಪರ್ವೇಜ್ ಪಾಷ, ಕೃತ್ಯದ ಬಳಿಕ ತಲೆಮರೆಸಿಕೊಂಡು ಚಿಂತಾಮಣಿಗೆ ಹೋಗಿ ಅಡಗಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಜೆ.ಜೆ.ನಗರ ಠಾಣೆ ಪೊಲೀಸರು, ಚಿಂತಾಮಣಿಗೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.