ಶನಿವಾರ, ಮೇ 28, 2022
21 °C

ಪದ್ಮಶ್ರೀ ಪುರ‌ಸ್ಕೃತ ಎಸ್‌.ಅಯ್ಯಪ್ಪನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ಸಂಶೋಧನೆಯಲ್ಲಿ ಸಕ್ರಿಯರಾಗಿದ್ದುಕೊಂಡೇ, ವಿವಿಧ ಸಂಸ್ಥೆಗಳನ್ನು ಕಟ್ಟಿಬೆಳೆಸಿದ ಎಸ್. ಅಯ್ಯಪ್ಪನ್ ಅವರು ಈ ಬಾರಿ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಈಗ ಅವರು ಇಂಫಾಲದ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ (ಸಿಎಯು) ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಯ್ಯಪ್ಪನ್‌ ಅವರು 1955 ಡಿಸೆಂಬರ್‌ 10ರಂದು ಯಳಂದೂರಿನ ಅಲಕೆರೆ ಗ್ರಾಮದಲ್ಲಿ ಜನಿಸಿದರು. ಮಂಗಳೂರಿನಲ್ಲಿ ಪದವಿ (ಬಿ.ಎಫ್‌.ಎಸ್‌ಸಿ–1975ರಲ್ಲಿ) ಹಾಗೂ ಸ್ನಾತಕೋತ್ತರ ಪದವಿ (ಎಂ.ಎಫ್‌.ಎಸ್‌ಸಿ– 1977ರಲ್ಲಿ) ‍ವ್ಯಾಸಂಗ ಮಾಡಿದ್ದ ಅವರು 1998ರಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಪೂರ್ಣಗೊಳಿಸಿದ್ದರು.

ಡಿಪಾರ್ಟ್‌ಮೆಂಟ್‌ ಆಫ್‌ ಅಗ್ರಿಕಲ್ಚರಲ್‌ ರೀಸರ್ಚ್‌ ಆ್ಯಂಡ್‌ ಎಜುಕೇಷನ್‌ನ (ಡಿಎಆರ್‌ಇ) ಕಾರ್ಯದರ್ಶಿಯಾಗಿ, ಭಾರತೀಯ ಕೃಷಿ ಸಂಶೋಧನಾ ಪರಿಷತ್‌ನ (ಐಸಿಎಆರ್‌) ವ್ಯವಸ್ಥಾಪಕ ನಿರ್ದೇಶಕರಾಗಿ, ರಾಷ್ಟ್ರೀಯ ಕೃಷಿ ವಿಜ್ಞಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು. 

ಕೃಷಿ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಅವರು ಹಲವು ಸಮಿತಿಗಳ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಅವರಿಗೆ ಹಲವು ಪುರಸ್ಕಾರಗಳೂ ಒಲಿದಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು