ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಡೈನಾಮೈಟ್‌ ಸ್ಫೋಟದಲ್ಲಿ ಕಾರ್ಮಿಕರು ಸಾವು: ಪ್ರಧಾನಿ ಮೋದಿ ಸಂತಾಪ

Last Updated 22 ಜನವರಿ 2021, 8:58 IST
ಅಕ್ಷರ ಗಾತ್ರ

ಬೆಂಗಳೂರು: ಶಿವಮೊಗ್ಗದ ಕ್ರಷರ್‌ ಬಳಿ ಡೈನಾಮೈಟ್‌ ಸ್ಫೋಟದಿಂದ ಕಾರ್ಮಿಕರು ಸಾವಿಗೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

'ಶಿವಮೊಗ್ಗದಲ್ಲಿ ಜೀವಗಳು ಸಾವಿಗೀಡಾಗಿರುವುದು ನೋವು ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ, ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರವು ಸಾಧ್ಯವಾಗುವ ಎಲ್ಲ ರೀತಿಯ ಸಹಕಾರಗಳನ್ನೂ ನೀಡುತ್ತಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವಿಟಿಸಿದೆ.

ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ.

ಭೂಕಂಪನದ ಸಮಯದಲ್ಲೇ ಈ ಘಟನೆ ನಡೆದಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, 'ಇದೊಂದು ಆಘಾತಕಾರಿ, ದುರದೃಷ್ಟಕರ ಘಟನೆ' ಎಂದಿದ್ದಾರೆ. ಮೃತರ ಕುಟುಂಬದವರಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸ್ಫೋಟ ಸಂಭವಿಸಿರುವ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿರುವುದು.

ಮುರುಗೇಶ್ ನಿರಾಣಿ ಟ್ವೀಟ್

'ಅಕ್ರಮ ಕಲ್ಲುಕ್ವಾರಿಯಲ್ಲಿ ತೊಡಗಿಸಿಕೊಂಡವರು ಎಷ್ಟೇ ಪ್ರಭಾವಿಗಳಗಾಗಿದ್ದರೂ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗುವುದಿಲ್ಲ' ಎಂದು ಮುರುಗೇಶ್ ನಿರಾಣಿ ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT