ಶುಕ್ರವಾರ, ಅಕ್ಟೋಬರ್ 23, 2020
26 °C

ಅರಮನೆ, ಚಾಮುಂಡಿಬೆಟ್ಟ ಪ್ರವೇಶ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ದಸರಾ ಮಹೋತ್ಸವ ಹಾಗೂ ಕೋವಿಡ್‌–19 ಮುಂಜಾಗ್ರತಾ ಕ್ರಮವಾಗಿ ಬುಧವಾರ ಮಧ್ಯರಾತ್ರಿ 12 ಗಂಟೆಯಿಂದ ಅ.18ರ ಮಧ್ಯರಾತ್ರಿವರೆಗೆ ನಾಲ್ಕು ದಿನ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಅಲ್ಲದೇ, ಅ.23ರ ಬೆಳಿಗ್ಗೆ 5 ಗಂಟೆಯಿಂದ ನ.1ರ ಮಧ್ಯರಾತ್ರಿಯವರೆಗೆ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಅ.17ರಿಂದ ನ.1ರವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ ತಿಳಿಸಿದ್ದಾರೆ.

ಮಹಿಷ ದಸರೆಗೆ ಅನುಮತಿ ಇಲ್ಲ: ‘ಅ.15ರಂದು ಚಾಮುಂಡಿಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆಗೆ ಅವಕಾಶ ನೀಡಲು ಜಿಲ್ಲಾಡಳಿತ ನಿರಾಕರಿಸಿರುವುದರಿಂದ ಅಶೋಕಪುರಂನಲ್ಲಿರುವ ಅಂಬೇಡ್ಕರ್‌ ಉದ್ಯಾನದಲ್ಲಿ ಆಚರಣೆ ಮಾಡಲಾಗುವುದು’ ಎಂದು ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು