ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ ಮೀಸಲಾತಿ ಬಗ್ಗೆ ಸಂಪುಟದಲ್ಲಿ‌ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

Last Updated 21 ಮಾರ್ಚ್ 2023, 9:13 IST
ಅಕ್ಷರ ಗಾತ್ರ

ಬಾಗಲಕೋಟೆ: ಪಂಚಮಸಾಲಿ ಮೀಸಲಾತಿ ಬಗ್ಗೆ‌ ಸಂಪುಟದಲ್ಲಿ‌ ಚರ್ಚಿಸಿ, ನಂತರ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಹುನಗುಂದದಲ್ಲಿ ಮೀಸಲಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ‌ ಅವರು, ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನವರು ಅನವಶ್ಯಕ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಭರವಸೆಗಳು ಮಾತನಾಡಬಾರದು. ಕೆಲಸಗಳು ಮಾತನಾಡಬೇಕು. ಬೋಗಸ್ ಗ್ಯಾರಂಟಿ ಕಾರ್ಡ್ ನೀಡಿ ಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜಸ್ಥಾನ, ಛತ್ತೀಸಗಡದಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಈಡೇರಿಸಿಲ್ಲ. ಕರ್ನಾಟಕದ ಜನರು ಪ್ರಬುದ್ಧರಿದ್ದಾರೆ ಎಂದರು.

ಹಲಕುರ್ಕಿ ರೈತರ ಭೂಸ್ವಾಧೀನ ಕುರಿತು ಪ್ರತಿಕ್ರಿಯಿಸಿ, ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT