ಮಂಗಳವಾರ, ಏಪ್ರಿಲ್ 20, 2021
32 °C
ಉಪವಾಸ ನಿರ್ಧಾರ ಕೈಬಿಡಲು ಭಕ್ತರ ಒತ್ತಾಯ

ಪಂಚಮಸಾಲಿ ಸಭೆ: ಹೋರಾಟ ರೂಪುರೇಷೆಗೆ ಹಿರಿಯರ ಸಲಹಾ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಧರಣಿ ನಡೆಸುತ್ತಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾರ್ಚ್‌ 4ರ ನಂತರ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಪ್ರಕಟಿಸಿದ್ದರು. ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಭಕ್ತರು ಒತ್ತಾಯಿಸಿದರು. ನಂತರ,  ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ಹಿರಿಯರ ಸಲಹಾ ಸಮಿತಿ ರಚಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಹೋರಾಟದ ಮುಂದಿನ ರೂಪು–ರೇಷೆ ಕುರಿತು ಚರ್ಚಿಸಲು ಸಮುದಾಯದ ರಾಜ್ಯ ಮತ್ತು ರಾಷ್ಟ್ರದ ಪದಾಧಿಕಾರಿಗಳ ಸಭೆಯನ್ನು ಗುರುವಾರ ಕರೆಯಲಾಗಿತ್ತು. ಬೇಡಿಕೆ ಈಡೇರುವವರೆಗೂ ವಿವಿಧ ರೂಪದಲ್ಲಿ ಪ್ರತಿಭಟನೆ ತೀವ್ರಗೊಳಿಸಬೇಕು ಎಂದು ಹಲವು ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.

‘4ರವರೆಗೆ ಧರಣಿ ಮುಂದುವರಿಸೋಣ. ಸರ್ಕಾರ ಆಗಲೂ ಬೇಡಿಕೆ ಈಡೇರಿಸದಿದ್ದರೂ ಸ್ವಾಮೀಜಿಯವರು ಉಪವಾಸ ಸತ್ಯಾಗ್ರಹ ಮಾಡುವುದು ಬೇಡ. ಬದಲಾಗಿ, ಸಮುದಾಯದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸೋಣ’ ಎಂದು ಸಮುದಾಯದ ನಾಯಕಿ ವೀಣಾ ಕಾಶಪ್ಪನವರ ಸಲಹೆ ನೀಡಿದರು. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸ್ವಾಮೀಜಿಯವರಿಗೇ ಬಿಡಲಾಯಿತು. ‘ನನ್ನ ಮೇಲೆ ಕೆಲವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ, ನಾನು ಯಾರ ಕಪಿಮುಷ್ಠಿಯಲ್ಲೂ ಇಲ್ಲ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು