ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಿಸಿ ಮೀಸಲಾತಿ ಇಲ್ಲದೇ ಪಂಚಾಯಿತಿ ಚುನಾವಣೆ ‌ನಡೆಸಲಾಗಲ್ಲ: ಈಶ್ವರಪ್ಪ

Last Updated 27 ಫೆಬ್ರುವರಿ 2022, 6:33 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂಬ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಹೀಗಾಗಿ ಮೀಸಲಾತಿ ಬಗ್ಗೆ ಅಂತಿ‌ಮ ನಿರ್ಣಯ ಹೊರಬಿದ್ದ‌ ಬಳಿಕ ಪಂಚಾಯಿತಿಗಳಿಗೆ ‌ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ‌ಕೆ.ಎಸ್. ಈಶ್ವರಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬಿಸಿ ಮೀಸಲಾತಿ ಇಲ್ಲದೇ ಚುನಾವಣೆ ನಡೆಸಬಾರದು ಅನ್ನುವುದು ನಮ್ಮ ನಿರ್ಧಾರ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ಯಾವಾಗ ಚುನಾವಣೆ ನಡೆಯುತ್ತದೆ ಅನ್ನುವುದನ್ನು ಈಗಲೇ ಹೇಳಲು ಆಗುವುದಿಲ್ಲ ‌ಎಂದರು.

ಮೇಕೆದಾಟು ಪಾದಯಾತ್ರೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ, ಅವರ ಸರ್ಕಾರ ಇದ್ದಾಗ ಯೋಜನೆ ಏಕೆ ಜಾರಿ ಮಾಡಲಿಲ್ಲ. ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂದು ‌ಆರೋಪಿಸಿದರು.

ರಾಜ್ಯದಲ್ಲಿ ಹಿಜಾಬ್, ಹಿಂದು- ಮುಸ್ಲಿಂ ಗಲಾಟೆಗಳು ಆಗಲು ಕಾರಣ ಕಾಂಗ್ರೆಸ್.ಹಿಂದು ಮುಸ್ಲಿಂ ದೂರದೂರವಾಗಬೇಕು ಅಂತ ರಾಜಕೀಯ ಮಾಡುತ್ತಿದ್ದಾರೆ. ಮುಸ್ಲಿಂ ಮತ ಬ್ಯಾಂಕ್ ಗಾಗಿ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಜಾತಿಗಳನ್ನು ಒಡೆದು ಅಧಿಕಾರ ಕಳೆದುಕೊಂಡಿದೆ. ಇದೀಗ ಹಿಂದು ಮುಸ್ಲಿಂ ವಿವಾದ ಹೆಚ್ಚಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT