ಬುಧವಾರ, ಆಗಸ್ಟ್ 17, 2022
29 °C

ಪಂಚಾಯಿತಿ ಸ್ಥಾನ ಹರಾಜು; 9 ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಹರಾಜು ಮೂಲಕ ಪಡೆಯಲು ಯತ್ನಿಸಿದ ಆರೋಪದ ಮೇಲೆ ಜಿಲ್ಲೆಯಲ್ಲಿ 9 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ತುರುವೇಕೆರೆ ತಾಲ್ಲೂಕಿನ ಮುದ್ದನಹಳ್ಳಿ ಗ್ರಾಮದ ಸಿದ್ದೇಗೌಡ, ಹುಚ್ಚೇಗೌಡ ಹಾಗೂ ಶ್ರೀನಿವಾಸ ಎಂಬುವವರನ್ನು ಬಂಧಿಸಿದ್ದಾರೆ.

ಕುಣಿಗಲ್ ತಾಲ್ಲೂಕಿನ ಕಿತ್ತಾನಾಗಮಂಗಲ ಪಂಚಾಯಿತಿ ವ್ಯಾಪ್ತಿಯ ಕಾಡುಮತ್ತೀಕೆರೆ ಗ್ರಾಮ, ತುರುವೇಕೆರೆ ತಾಲ್ಲೂಕು ಮಾವಿನಕೆರೆ ಪಂಚಾಯಿತಿ ವ್ಯಾಪ್ತಿಯ ಮಾವಿನಕೆರೆ, ಮುದಿಗೆರೆ, ಬ್ಯಾಡರಹಳ್ಳಿ, ಕರಡಗೆರೆ, ಮೇಲಿನವರೆಗರಹಳ್ಳಿ, ಕಣತೂರು ಪಂಚಾಯಿತಿ ವ್ಯಾಪ್ತಿಯ ಕಣತೂರು, ಮುದ್ದನಹಳ್ಳಿ, ಗೋಣಿ ತುಮಕೂರು, ತಾಳಕೆರೆ ಪಂಚಾಯಿತಿ ‌‌‌ವ್ಯಾಪ್ತಿಯ ಪುರ ಗ್ರಾಮದಲ್ಲಿ ಹರಾಜು ಪ್ರಕ್ರಿಯೆ ನಡೆದಿರುವ ಬಗ್ಗೆ ಮಾಹಿತಿ ಕಲೆಹಾಕಿ ಹರಾಜಿನಲ್ಲಿ ಪಾಲ್ಗೊಂಡವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಗುಬ್ಬಿ ತಾಲ್ಲೂಕು ಗುಡ್ಡದಹಳ್ಳಿ, ತಿಪಟೂರು ತಾಲ್ಲೂಕು ನೊಣವಿನಕೆರೆ ಪಂಚಾಯಿತಿ ವ್ಯಾಪ್ತಿಯ ಆಲ್ಬೂರು ಗ್ರಾಮದಲ್ಲಿ ಸ್ಥಾನಗಳ ಹರಾಜು ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು