ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮೇಶ್ವರಗೆ ಅಸಮಾಧಾನ ಇಲ್ಲ: ಡಿಕೆಶಿ

Last Updated 3 ಫೆಬ್ರುವರಿ 2023, 18:53 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ವಿಷಯದಲ್ಲಿ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಅಸಮಾಧಾನಗೊಂಡಿದ್ದಾರೆ
ಎಂಬುದರಲ್ಲಿ ಸತ್ಯಾಂಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭಕ್ಕೆ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಪರಮೇಶ್ವರ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ರಾಜ್ಯದ ಇತಿಹಾಸದಲ್ಲಿ ಸುದೀರ್ಘ ಕಾಲ ಪಕ್ಷದ ಅಧ್ಯಕ್ಷರಾಗಿದ್ದವರು. ಪರಮೇಶ್ವರ ಜತೆ ಸುರ್ಜೆವಾಲಾ ಅವರು ಸಭೆ ನಡೆಸಿದ್ದಾರೆ’ ಎಂದು ಹೇಳಿದರು.

‘ಬೆಂಗಳೂರು ಬಗ್ಗೆ ವಿಶೇಷ ಚಿಂತನೆ ಮಾಡಬೇಕಿದ್ದು, ಪರಮೇಶ್ವರ ಅವರ ನೇತೃತ್ವದ ತಂಡ ವಿದೇಶಕ್ಕೆ ತೆರಳಿ, ಸಂಚಾರ ನಿರ್ವಹಣೆ ಕುರಿತು ಅಧ್ಯಯನ ಮಾಡಲಿದೆ. ನಾವು ಈಗಾಗಲೇ ಸಿಂಗಾಪುರ ಆಡಳಿತದ ಜತೆ ಮಾತುಕತೆ ನಡೆಸಿದ್ದೇವೆ. ತಂಡ ರಚನೆ ಬಗ್ಗೆ ಚರ್ಚೆ ಮಾಡಲಾಗಿದೆ. ನಮ್ಮ ರಾಜ್ಯಕ್ಕೆ ಪ್ರಣಾಳಿಕೆ ನೀಡುವಾಗ ಬೆಂಗಳೂರಿಗೆ ಬಂದಿರುವ ಕಳಂಕ ತೊಡೆದುಹಾಕುವ ಪ್ರಯತ್ನ ಮಾಡುತ್ತೇವೆ’
ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT