ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಲ್ಕ ಕಡಿಮೆ ಮಾಡಲು ಖಾಸಗಿ ಶಾಲೆಗಳ ಒಪ್ಪಿಗೆ: ಸುರೇಶ್‌ ಕುಮಾರ್‌

Last Updated 16 ಜನವರಿ 2021, 3:07 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ ಕಾರಣದಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿರುವ ಪೋಷಕರ ಪರಿಸ್ಥಿತಿಯನ್ನು ಮನಗಂಡು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶುಲ್ಕ ಕಡಿಮೆ ಮಾಡಲು ಒಪ್ಪಿಗೆ ಸೂಚಿಸಿವೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಖಾಸಗಿ ಶಾಲೆಗಳ ಸಂಘಟನೆಗಳಾದ ಕ್ಯಾಮ್ಸ್, ಕುಸ್ಮ, ಕುಪ್ಸ ಹಾಗೂ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಪೋಷಕರ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು. ಎರಡೂವರೆ ಗಂಟೆಗಳ ಕಾಲ ಚರ್ಚೆಯ ನಂತರ ಆಡಳಿತ ಮಂಡಳಿಗಳು ಈ ನಿರ್ಧಾರ ಪ್ರಕಟಿಸಿವೆ’ ಎಂದು ಅವರು ತಿಳಿಸಿದ್ದಾರೆ.

‘ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಗೆ ವೇತನ ನೀಡುವುದಕ್ಕೆ ಆಗದಿರುವ ಪರಿಸ್ಥಿತಿಯನ್ನೂ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಗಮನಕ್ಕೆ ತಂದಿದ್ದಾರೆ' ಎಂದು ಹೇಳಿದ್ದಾರೆ.

‘ಇಲಾಖೆಯ ಆಯುಕ್ತರು ಸಭೆಯ ಸಂಪೂರ್ಣ ವರದಿಯನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ನೀಡಿದ ನಂತರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಶುಲ್ಕ ಹಿಂತಿರುಗಿಸಿ

‘ಖಾಸಗಿ ಶಾಲೆಗಳು ಕಾನೂನುಬಾಹಿರವಾಗಿ ಪಡೆಯುವ ಶುಲ್ಕಗಳನ್ನು ತಡೆಯಬೇಕು ಮತ್ತು ಹೆಚ್ಚುವರಿಯಾಗಿ ಪಡೆದ ಶುಲ್ಕವನ್ನು ಪೋಷಕರಿಗೆ ಹಿಂತಿರುಗಿಸಬೇಕು’ ಎಂದು ಕರ್ನಾಟಕ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಸಚಿವರಿಗೆ ಮನವಿ ಸಲ್ಲಿಸಿತು.

‘ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಲು ಅವಕಾಶ ನೀಡಬೇಕು. 9ನೇ ತರಗತಿಯವರೆಗಿನ ಮಕ್ಕಳಿಗೆ ಶಾಲಾ ವಾತಾವರಣರವು ಸುರಕ್ಷಿತ ಎನ್ನುವವರೆಗೆ ಖಾಸಗಿ ಶಾಲೆಗಳ ಪುನರಾರಂಭಕ್ಕೆ ಅವಕಾಶ ನೀಡಬಾರದು’ ಎಂದು ಸಮಿತಿಯ ಅಧ್ಯಕ್ಷ ಬಿ.ಎಸ್. ಯೋಗಾನಂದ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT