ಶನಿವಾರ, ಆಗಸ್ಟ್ 13, 2022
27 °C

‘ಪಠ್ಯ: ತಪ್ಪು ಒಪ್ಪಿಕೊಂಡ ಮೇಲೆ ವಿತರಣೆ ಸಲ್ಲ’: ಶಾಲಾ–ಕಾಲೇಜು ಪೋಷಕರ ವೇದಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ತಿದ್ದೋಲೆ ಆದೇಶ ಹೊರಡಿಸುವ ಮೂಲಕ ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ಅನೇಕ ಲೋಪ, ತಪ್ಪುಗಳನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಪರಿಷ್ಕೃತ ಪಠ್ಯಗಳನ್ನು ಮಕ್ಕಳಿಗೆ ವಿತರಿಸಬಾರದು’ ಎಂದು ರಾಜ್ಯ ಖಾಸಗಿ ಶಾಲಾ–ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ.

‘ಪರಿಷ್ಕೃತ ಪಠ್ಯ ಪುಸ್ತಕವನ್ನು ಮಕ್ಕಳಿಗೆ ವಿತರಿಸುವುದನ್ನು ತಕ್ಷಣ ನಿಲ್ಲಿಸಬೇಕು. ಈಗಾಗಲೇ ವಿತರಿಸಿರುವ ಪಠ್ಯಗಳನ್ನು ವಾಪಸು ಪಡೆದು ಶಾಲಾ ಮಕ್ಕಳ ಭವಿಷ್ಯವನ್ನು ಕಾಪಾಡಬೇಕು’ ಎಂದೂ ವೇದಿಕೆಯ ಕಾರ್ಯಕಾರಿ ಸಮಿತಿಯ ಬಿ.ಎನ್‌. ಯೋಗಾನಂದ, ಕೇಸರಿ ಹರವು, ಚಿದಾನಂದ, ಭಾಸ್ಕರ್ ರೆಡ್ಡಿ ಮತ್ತಿತರರು ಮುಖ್ಯಮಂತ್ರಿ ಬಳಿ ಆಗ್ರಹಿಸಿದ್ದಾರೆ.

‘ಪಠ್ಯ ಪರಿಷ್ಕರಣೆ ಪ್ರಕ್ರಿಯೆಯೇ ನಿಯಮಬಾಹಿರ ಆಗಿರುವುದರಿಂದ ತಿದ್ದೋಲೆ ಮೂಲಕ ಸರ್ಕಾರ ಮತ್ತೊಮ್ಮೆ ಸಮರ್ಥಿಸಿಕೊಂಡಿರುವುದು ಜನವಿರೋಧಿ ನಡೆ. ಪರಿಷ್ಕರಣೆಯ ಮೂಲ ಆಲೋಚನೆಗಳೇ ಸಂವಿಧಾನಬಾಹಿರ, ಪ್ರಜಾಪ್ರಭುತ್ವ ವಿರೋಧಿ ಮತ್ತು ದುರುದ್ದೇಶದಿಂದ ಕೂಡಿದೆ. ಸರ್ಕಾರ ಹೊರಡಿಸಿರುವ ತಿದ್ದೋಲೆಯಿಂದಾಗಿ ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಪಾಠ ಕಲಿಸುವ ಬದಲು, ಪುಸ್ತಕದಲ್ಲಿರುವ ದೋಷಗಳನ್ನು ತಿದ್ದುವ ಕಾರ್ಯದಲ್ಲಿಯೇ ಶೈಕ್ಷಣಿಕ ವರ್ಷ ಮುಗಿಯಲಿದೆ. ಇದು ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರಲಿದೆ’ ಎಂದೂ ವೇದಿಕೆ ಅಭಿಪ್ರಾಯಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು