ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 16ರಿಂದ ಪೌತಿ ಖಾತೆ ಅಭಿಯಾನ: ಅಶೋಕ

Last Updated 22 ಜೂನ್ 2022, 18:52 IST
ಅಕ್ಷರ ಗಾತ್ರ

ಬೆಂಗಳೂರು: ಮೃತಪಟ್ಟಿರುವ ರೈತರ ಹೆಸರಿನಲ್ಲಿರುವ ಭೂ ದಾಖಲೆಗಳನ್ನು ಅವರ ವಾರಸುದಾರರಿಗೆ ತ್ವರಿತವಾಗಿ ವರ್ಗಾಯಿಸಲು ಜುಲೈ 16ರಿಂದ ರಾಜ್ಯದಾದ್ಯಂತ ಪೌತಿ ಖಾತೆ ಅಭಿಯಾನ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಪೌತಿ ಖಾತೆಗಳ ವರ್ಗಾವಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ದೊಡ್ಡದಾಗಿದೆ. ಲಕ್ಷಾಂತರ ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಅವುಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದರು.

ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನಿನ ದಾಖಲೆಗಳು ಅವರ ವಾರಸುದಾರರಿಗೆ ವರ್ಗಾವಣೆ ಆಗದೇ ಇರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಕುಟುಂಬಗಳಿಗೆ ಸಾಧ್ಯವಾಗುತ್ತಿಲ್ಲ. ಕೃಷಿ ಸಂಬಂಧಿ ಸಾಲಗಳನ್ನು ಪಡೆಯುವುದಕ್ಕೂ ಆಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳಿಗೂ ಅಭಿಯಾನದ ಮೂಲಕ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಜುಲೈ 16ರಂದು ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆಸುವ ಗ್ರಾಮ ವಾಸ್ತವ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಪೌತಿ ಖಾತೆ ವರ್ಗಾವಣೆ ಆದೇಶ ಹೊರಡಿಸುವ ಅಧಿಕಾರವನ್ನುಉಪ ವಿಭಾಗಾಧಿಕಾರಿಗಳಿಗೆ ನೀಡಲಾಗುವುದು. ಮೃತರ ಹೆಸರಿನಲ್ಲಿರುವ ಪೌತಿ ಖಾತೆಗಳನ್ನು ವರ್ಗಾಯಿಸುವಾಗ ಅವರ ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳ ವಿವರವನ್ನು ಸ್ಥಳೀಯರಿಂದ ಖಚಿತಪಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT