ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಚಕ ವೃತ್ತಿ ಬ್ರಾಹ್ಮಣರಿಗೆ ಮಾತ್ರ ಸೀಮಿತ ಎಂದಿಲ್ಲ: ಪೇಜಾವರ ಸ್ವಾಮೀಜಿ

Last Updated 25 ಅಕ್ಟೋಬರ್ 2021, 20:44 IST
ಅಕ್ಷರ ಗಾತ್ರ

ಬೆಂಗಳೂರು: ‘ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಗೆ ಮಾತ್ರ ಸೀಮಿತಗೊಳಿಸಿ ಕಾನೂನು ರೂಪಿಸಬೇಕು ಎಂಬ ಯೋಚನೆಯೂ ನಮಗೆ ಬರಲು ಸಾಧ್ಯವಿಲ್ಲ’ ಎಂದು ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

‘ಇಂತಹದ್ದೊಂದು ಕಾನೂನು ರೂಪಿಸಬೇಕು ಎಂದು ಸರ್ಕಾರಕ್ಕೆ ನಾನು ಆಗ್ರಹಿಸಿರುವುದಾಗಿ ವರದಿಯಾಗಿದೆ ಎಂದು ‘ಪ್ರಜಾವಾಣಿ’ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. ಆ ರೀತಿಯ ವರದಿ ಪತ್ರಿಕೆಗಳಲ್ಲಿ ವರದಿಯಾಗಿದ್ದರೆಅದಕ್ಕೆ ನಾವು ಹೊಣೆಗಾರರಲ್ಲ’ ಎಂದೂ ಅವರು ಹೇಳಿದ್ದಾರೆ.

‘ಹಿಂದೂ ಸಮಾಜದ ಅಖಂಡತೆಗಾಗಿ ಶ್ರಮಿಸುತ್ತಿರುವ ನಮ್ಮ ಮನೋಬಲವನ್ನು ಮುರಿಯುವ ಉದ್ದೇಶದಿಂದ, ಬ್ರಾಹ್ಮಣ ಮತ್ತು ಬ್ರಾಹ್ಮಣೇತರರೊಳಗೆ ಒಡಕು ಸೃಷ್ಟಿಸಲು, ಬ್ರಾಹ್ಮಣೇತರರನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿ ಛೂಬಿಡುವ ಪ್ರಯತ್ನ ಈ ವರದಿಗಳ ಮೂಲಕ ನಡೆದಿದೆ. ಇದರಿಂದ ನೊಂದಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT