ಗುರುವಾರ , ಮಾರ್ಚ್ 23, 2023
32 °C

ಕೋವಿಡ್ ಶೇ 2ಕ್ಕಿಂತ ಹೆಚ್ಚಿದರೆ ಜಿಲ್ಲೆಗಳಲ್ಲಿ ಚಟುವಟಿಕೆ ನಿರ್ಬಂಧ: ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನ ಪ್ರಮಾಣ ಶೇ 2ಕ್ಕಿಂತ ಹೆಚ್ಚುವ ಜಿಲ್ಲೆಗಳಲ್ಲಿ ತಕ್ಷಣವೇ ಚಟುವಟಿಕೆಗಳನ್ನು ನಿರ್ಬಂಧಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿಯೂ ಈ ವಿಚಾರವನ್ನು ತಿಳಿಸಿದ್ದೇನೆ’ ಎಂದರು.

ಈಗ ಶಿಕ್ಷಣ, ವ್ಯಾಪಾರ ಸೇರಿ ಎಲ್ಲ ಚಟುವಟಿಕೆಗೆ ಅವಕಾಶ ಮಾಡಿ
ಕೊಟ್ಟಿದ್ದೇವೆ. ಸೋಂಕು ಹೆಚ್ಚಿದರೆ ಆ ಜಿಲ್ಲೆಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಬೇಕಾಗುತ್ತದೆ. ಇದರಿಂದ ಸಂಭವನೀಯ ಕೋವಿಡ್ 3ನೇ ಅಲೆ ತಡೆಯಲು ಸಾಧ್ಯ. ಮೂರನೇ ಅಲೆ ತಡೆಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು