ಮಂಗಳವಾರ, ಮಾರ್ಚ್ 28, 2023
33 °C

ದೇವಸ್ಥಾನಗಳಲ್ಲಿ ಸೇವೆ ಆರಂಭಿಸಲು ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ದೈನಂದಿನ ಸೇವೆಗಳನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆ, ‘ಆಯಾ ದೇವಾಲಯಗಳ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಹಿಂದೆ ನಡೆಸುತ್ತಿದ್ದ ಸೇವಗಳನ್ನು ಭಕ್ತರ ಸಂಖ್ಯೆ ಹಾಗೂ ಸ್ಥಳಾವಕಾಶದ ಲಭ್ಯತೆ ಆಧಾರದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ಅನುವಂಶಿಕ ಮೊಕ್ತೇಸರರು ನಿಗದಿಪಡಿಸಬೇಕು. ಕೊರೊನಾ ಸೋಂಕು ಹರಡದಂತೆ ಮಾರ್ಗಸೂಚಿಗಳನ್ನು ಪಾಲಿಸಿ, ಭಕ್ತರಿಗೆ ಅವಕಾಶ ಕಲ್ಪಿಸಬೇಕು’ ಎಂದು ತಿಳಿಸಲಾಗಿದೆ.

‘ಜಾತ್ರಾ ಮಹೋತ್ಸವ, ಬ್ರಹ್ಮರಥೋತ್ಸವ ಮುಂತಾದ ವಿಶೇಷ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಉತ್ಸವಗಳನ್ನು ನಿಲ್ಲಿಸುವ ಸಂಪ್ರದಾಯ ಇಲ್ಲದ ದೇವಸ್ಥಾನಗಳಲ್ಲಿ ಸಾಂಕೇತಿಕವಾಗಿ, ಭಕ್ತಸಂದಣಿ ಇಲ್ಲದಂತೆ ನಡೆಸಬಹುದು. ಆದರೆ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಇಲಾಖೆಯ ಆಯುಕ್ತರಿಗೆ, ಸಹಾಯಕ ಆಯುಕ್ತರು ವರದಿ ನೀಡಬೇಕು’ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು