ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಅಕ್ರಮ: ಉಪಕರಣ ಪೂರೈಸಿದ್ದ ಆರೋಪಿ ಬಂಧನ

Last Updated 19 ಅಕ್ಟೋಬರ್ 2022, 21:47 IST
ಅಕ್ಷರ ಗಾತ್ರ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪ‍ರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬುಧವಾರ ಗೋಕಾಕ ತಾಲ್ಲೂಕಿನ ಉಪ್ಪಾರಹಟ್ಟಿಯ ಭೀಮಶಿ ಸಿದ್ದಪ್ಪ ಗುದಿಗೊಪ್ಪ (30) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೆ ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

‘ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈತ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೂರೈಸಿದ್ದ. ಇದಲ್ಲದೇ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸಲು ಇಬ್ಬರು ಆರೋಪಿಗಳಿಗೆ ಹಣ ನೀಡಿದ್ದ. ಅವನ ಬಳಿ ಇದ್ದ 6 ಮೊಬೈಲ್, ತಲಾ ಒಂದು ಲ್ಯಾಪ್‌ಟಾಪ್, ಕಾರು ಹಾಗೂ 3 ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT