ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ನಿಷೇಧ ಪ್ರಶ್ನಿಸಿದ ಅರ್ಜಿ ವಜಾ

Last Updated 30 ನವೆಂಬರ್ 2022, 20:48 IST
ಅಕ್ಷರ ಗಾತ್ರ

ಬೆಂಗಳೂರು:ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್ಐ) ಸಂಘಟನೆ ನಿಷೇಧಿಸಿದ ಕ್ರಮವನ್ನು ಪ್ರಶ್ನಿಸಲಾಗಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ‘ಕೇಂದ್ರ ಸರ್ಕಾರ ಹೊರ ಡಿಸಿರುವ ಅಧಿಸೂಚನೆಯಲ್ಲಿ ನಿಷೇಧಕ್ಕೆ ಕಾರಣಗಳನ್ನು ಆಧಾರ ಸಹಿತವಾಗಿಯೇ ಕೊಡಲಾಗಿದೆ. ಹಾಗಾಗಿ, ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.

ನಿಷೇಧ ಕ್ರಮವನ್ನು ಪ್ರಶ್ನಿಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಪಿಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಪಾಷ ಪರವಾಗಿ ಆತನ ಪತ್ನಿ ಅರ್ಷಿಯಾ ಫಾತಿಮಾ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

ನಿಷೇಧವನ್ನು ತಕ್ಷಣದಿಂದ ಜಾರಿಗೆ ತಂದಿರುವ ಬಗ್ಗೆ ಅರ್ಜಿದಾರರು ಬಲ ವಾಗಿ ಆಕ್ಷೇಪಿಸಿದ್ದರು. ಆದರೆ, ಈ ವಾದವನ್ನು ಸಾರಾಸಗಟಾಗಿ ತಳ್ಳಿ ಹಾಕಿರುವ ನ್ಯಾಯಪೀಠ, ‘ಇಸ್ಲಾಮಿಕ್ ರೀಸರ್ಚ್ ಫೌಂಡೇಷನ್ (ಐಆರ್‌ಎಸ್) ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನೀಡಿ ರುವ ತೀರ್ಪನ್ನು ಸುಪ್ರೀಂಕೋರ್ಟ್ ಮಹಮ್ಮದ್ ಜಾಫರ್ ಪ್ರಕರಣದಲ್ಲಿ ಪರಿಗಣಿಸಿದೆ’ ಎಂದು ತೀರ್ಪಿನಲ್ಲಿ ಉಲ್ಲೇ ಖಿಸಿದೆ.

‘ಸಂವಿಧಾನದಡಿ ಕೊಡ ಮಾಡಲಾದ ಹಕ್ಕು ಮತ್ತು ಸ್ವಾತಂತ್ರ್ಯಗಳು 19 (1) (ಸಿ) ಹಾಗೂ 19 (4) ವಿಧಿಗಳನ್ನು ಅವಲಂಬಿಸಿವೆ. ದೇಶದ ಸಮಗ್ರತೆ ಹಾಗೂ ಏಕತೆಗೆ ಧಕ್ಕೆ ಬರುವ ಸಂದರ್ಭಗಳಿದ್ದಾಗ ಕೆಲವು ನಿರ್ಬಂಧ
ಗಳನ್ನು ಹೇರಬಹುದು’ ಎಂದು ಹೇಳಿದೆ.

‘ಪಿಎಫ್‌ಐ ಭಯೋತ್ಪಾದಕ ಸಂಘಟನೆಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿ ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿ ಮಾಡುತ್ತಿದೆ’ ಎಂಬ ಆರೋಪದಡಿ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಗೃಹ ಸಚಿವಾಲಯ 2022ರ ಸೆಪ್ಟೆಂಬರ್ 28ರಂದು ನಿಷೇಧಿಸಿತ್ತು. ಇದನ್ನು ಪ್ರಶ್ನಿಸಿದ್ದ ನಾಸಿರ್, ‘ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ-1967ರ(ಯುಎಪಿಎ) ಕಲಂ 3ರ, ಉಪ ನಿಯಮ 3ರ ಅಡಿ ಪಿಎಫ್‌ಐ ಸಂಘಟನೆ ನಿಷೇಧಿಸಿರುವುದು ಕಾನೂನುಬಾಹಿರ’ ಎಂದು ಆಕ್ಷೇಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT