ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರ ಸಂಘದ ಚುನಾವಣೆಯ ಮತಗಳ ಮರು ಎಣಿಕೆಗೆ ಅರ್ಜಿ : ಹೈಕೋರ್ಟ್‌ ನೋಟಿಸ್

Last Updated 30 ಡಿಸೆಂಬರ್ 2021, 17:57 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ ಡಿ.12ರಂದು ನಡೆದಿದ್ದ ಚುನಾವಣೆಯಲ್ಲಿ ಚಲಾವಣೆಗೊಂಡಿರುವ ಎಲ್ಲ ಮತಗಳ ಮರುಎಣಿಕೆ ನಡೆಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ತಕರಾರು ಅರ್ಜಿ ಸಂಬಂಧ ಸಂಘದ ಆಡಳಿತಾಧಿಕಾರಿ ಹಾಗೂ ಚುನಾವಣಾಧಿಕಾರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹೆಸರಘಟ್ಟ ಹೋಬಳಿಯ ಕಡತನಮಲೆ ಗ್ರಾಮದ ಕೆ.ಆರ್. ಸತೀಶ್ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ರಜಾಕಾಲದ ಪೀಠ ವಿಚಾರಣೆ ನಡೆಸಿತು.

ವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ರಾಜ್ಯ ಒಕ್ಕಲಿಗರ ಸಂಘದ ಚುನಾವಣಾಧಿಕಾರಿ ಹಾಗೂ ಆಡಳಿತಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ತುರ್ತು ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.

ಆಕ್ಷೇಪವೇನು?: ‘ರಾಜ್ಯ ಒಕ್ಕಲಿಗರ ಸಂಘಕ್ಕೆ ಡಿ.12ರಂದು ನಡೆದಿದ್ದ ಚುನಾವಣೆಯಲ್ಲಿ ಒಟ್ಟು 1,40,704 ಮತಗಳು ಚಲಾವಣೆಗೊಂಡಿದ್ದವು. ಡಿ.15ರಂದು ಮತ ಎಣಿಕೆ ನಡೆದಿತ್ತು. ಆದರೆ, ಮತ ಎಣಿಕೆಗೆ ನಿಯೋಜಿಸಲ್ಪಟ್ಟಿದ್ದ ಸಿಬ್ಬಂದಿ ಚುನಾವಣಾ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಹೆಚ್ಚುವರಿ ಮತಗಳನ್ನು ಸೇರಿಸಲು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ವಿಚಾರ ಪತ್ರಿಕೆಗಳಲ್ಲೂ ಪ್ರಕಟಗೊಂಡಿದೆ. ಮತ ಎಣಿಕೆಗೆ ನಿಯೋಜಿಸಲ್ಪಟ್ಟ ಸಿಬ್ಬಂದಿ ಅಕ್ರಮವೆಸಗಿದ್ದು, ಇಡೀ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿಲ್ಲ’ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT