ಬುಧವಾರ, ಆಗಸ್ಟ್ 10, 2022
21 °C

ಆರೋಗ್ಯ ಸೇತು ಆ್ಯಪ್: ಮಾಹಿತಿ ಅಳಿಸಲು ಕೋರಿ ಅರ್ಜಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರೋಗ್ಯ ಸೇತು ಆ್ಯಪ್‌ನಲ್ಲಿ ಗೋಪ್ಯತೆ ಉಲ್ಲಂಘನೆ ಆಗುವ ಕಾರಣ ಅದರಲ್ಲಿ ದತ್ತಾಂಶ ಅಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಆರೋಗ್ಯ ಸೇತು ಆ್ಯಪ್ ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಳ್ಳುವುದನ್ನು ಪ್ರಶ್ನಿಸಿದ್ದ ಅರವಿಂದ ಎ. ಅರವಿಂದ್ ಅವರು, ಅರ್ಜಿಯನ್ನು ತಿದ್ದುಪಡಿ ಮಾಡಿ ಸಲ್ಲಿಸಿದ್ದಾರೆ.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಸರ್ಕಾರಿ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವುದು ಕಡ್ಡಾಯವೇ ಎಂಬ ಮುಖ್ಯ ವಿಷಯ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.