ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಲ್ಲಿ ಶಿಕ್ಷಕರ ಭಾವಚಿತ್ರ: ಬಾಡಿಗೆ ಶಿಕ್ಷಕರ ದಂಧೆಗೆ ಕಡಿವಾಣ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಸ್ತಾಪ
Last Updated 13 ಜುಲೈ 2022, 19:00 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರ ವಿವರ ಸಹಿತ ಭಾವಚಿತ್ರಗಳನ್ನು ಆಯಾ ಶಾಲೆಯಲ್ಲಿ ಪ್ರದರ್ಶಿಸಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಕೆಲವು ಶಿಕ್ಷಕರು ಸರ್ಕಾರದಿಂದ ಉತ್ತಮ ವೇತನ ಪಡೆದರೂ, ತರಗತಿಗಳಿಗೆ ಹಾಜರಾಗದೆ ತಮಗೆ ಸಿಗುವ ವೇತನದಲ್ಲಿ ಸ್ವಲ್ಪ ಭಾಗವನ್ನು ನಿರೋದ್ಯೋಗಿ ಪ್ರತಿಭಾವಂತ ರಿಗೆ ನೀಡಿ (ಬಾಡಿಗೆ ಶಿಕ್ಷಕರು) ಮಕ್ಕಳಿಗೆ ಪಾಠ ಮಾಡಿಸುತ್ತಿರುವ ಹಲವು ಪ್ರಕರಣಗಳು ಪತ್ತೆಯಾಗಿವೆ. ಇದಾದ ಬಳಿಕ ಕೇಂದ್ರ ಸರ್ಕಾರ ಇಂತಹ ನಿರ್ಧಾರ ತೆಗೆದುಕೊಂಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಇನ್‌ಇಪಿ ಅನುಷ್ಠಾನ ಕುರಿತು ನಡೆದ ಚರ್ಚೆ ನಡೆಯಿತು. ಈ ಸಭೆಯಲ್ಲಿ ಶಿಕ್ಷಕರ ನಿರಂತರ ಗೈರು ಹಾಜರಿ, ಬಾಡಿಗೆ ಶಿಕ್ಷಕರ ನೆರವಿನ ವಿಷಯವೂ ಪ್ರಸ್ತಾಪವಾಗಿದೆ. ಶಾಲೆಗಳಿಗೆ ನೇಮಕವಾದ ಶಿಕ್ಷಕರನ್ನು ಸ್ಥಳೀಯ ಪೋಷಕರು ಗುರುತಿಸಲು, ಅವರ ನಿರಂತರ ಹಾಜರಾತಿ ಖಚಿತಪಡಿಸಿಕೊಳ್ಳಲು ಪ್ರತಿ ಶಿಕ್ಷಕರ ಭಾವಚಿತ್ರಗಳನ್ನು ಹಾಕಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ.

ದೇಶದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 9.68 ಕೋಟಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಲ್ಲಿ ಶೇ 8ರಿಂದ 10ರಷ್ಟು ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗದೆ ತಮಗೆ ಬರುವ ವೇತನದಲ್ಲಿ ಒಂದಷ್ಟು ಹಣ ನೀಡಿ ಬಾಡಿಗೆ ಶಿಕ್ಷಕರನ್ನು ನೇಮಿಸಿಕೊಂಡು ಪಾಠ ಮಾಡಿಸುವ ಪ್ರಕರಣಗಳನ್ನು ಮಾನವ ಸಂಪನ್ಮೂಲ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಪತ್ತೆ ಮಾಡಲಾಗಿತ್ತು. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಇಂತಹ ಪ್ರಕರಣಗಳು ಕಂಡು ಬಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT