ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಐಎಲ್‌: ನಿಯಮ ಪಾಲನೆ ಕಡ್ಡಾಯ

Last Updated 11 ನವೆಂಬರ್ 2021, 16:34 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸುವಾಗ, ‘ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ’ಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಹೈಕೋರ್ಟ್‌ ಹೇಳಿದೆ.

ಕೃಷ್ಣ ಜಲಭಾಗ್ಯ ನಿಗಮ ಕರೆದಿದ್ದ ಅಲ್ಪಾವಧಿ ಟೆಂಡರ್‌ ಪ್ರಶ್ನಿಸಿ ರಾಯಚೂರಿನ ಮುದಗಲ್‌ ನಿವಾಸಿ ಡಿ.ಬಸವರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

’ಇದರಲ್ಲಿ ಕರ್ನಾಟಕ ಹೈಕೋರ್ಟ್ ಪಿಐಎಲ್ ನಿಯಮ ಪಾಲನೆ ಆಗಿಲ್ಲ’ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದ ನ್ಯಾಯಪೀಠ, ‘ಹೈಕೋರ್ಟ್‌ಗೆ ಸಲ್ಲಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು. ಇಲ್ಲವಾದರೆ, ಅಂತಹ ಅರ್ಜಿಗಳನ್ನು ನ್ಯಾಯಾಲಯದ ಮುಂದೆ ವಿಚಾರಣೆಗೆ ನಿಗದಿಪಡಿಸಬಾರದು’ ಎಂದು ನಿರ್ದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT