ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವು ಆಧಾರಿತ ಉತ್ಪನ್ನಕ್ಕೆ ಯೋಜನೆ: ಸಚಿವ ಪ್ರಭು ಚವ್ಹಾಣ

Last Updated 31 ಡಿಸೆಂಬರ್ 2021, 18:29 IST
ಅಕ್ಷರ ಗಾತ್ರ

ಬೆಂಗಳೂರು: ಗೋಶಾಲೆಗಳನ್ನು ಸ್ವಾವಲಂಬಿಯಾಗಿಸಲು ಗೋವು ಆಧಾರಿತ ಉತ್ಪನ್ನಗಳನ್ನು ತಯಾರಿಸುವ ಯೋಜನೆ ರೂಪಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.

ಗೋಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿದ್ದ ಅವರು, ಅಲ್ಲಿನ ಅಧ್ಯಯನದ ಮಾಹಿತಿಗಳನ್ನು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಹಂಚಿಕೊಂಡರು.

ಆ ರಾಜ್ಯಗಳಲ್ಲಿನ ಗೋಶಾಲೆಗಳಲ್ಲಿ ಗೋವುಗಳ ಸಗಣಿ, ಮೂತ್ರದಿಂದ ಸುಮಾರು ನೂರಕ್ಕೂ ಹೆಚ್ಚು ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಸರ್ಕಾರದ ಅನುದಾನವೇ ಇಲ್ಲದಂತೆ ಗೋಶಾಲೆಗಳನ್ನು ಸ್ವಾವಲಂಬಿಯಾಗಿಸಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಗೋಬರ್ ಧನ್ ಯೋಜನೆ ಅಡಿಯಲ್ಲಿ ಕೆಲ ಗೋಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT