ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಜನ್ಮದಿನ: ರಾಜ್ಯದಲ್ಲಿ 10,598 ಯೂನಿಟ್‌ ರಕ್ತ ಸಂಗ್ರಹ

Last Updated 18 ಸೆಪ್ಟೆಂಬರ್ 2022, 2:39 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರಾಜ್ಯದ ಹಲವೆಡೆ ಶನಿವಾರ ಆಯೋಜಿಸಿದ್ದ ರಕ್ತದಾನ ಶಿಬಿರಗಳಲ್ಲಿ ಒಟ್ಟು 10,598 ಯೂನಿಟ್‌ ರಕ್ತ ಸಂಗ್ರಹಿಸಲಾಗಿದೆ.

ಕಲ್ಯಾಣ ಕರ್ನಾಟಕದ ಕೆಲವು ಭಾಗಗಳನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಪಕ್ಷದ ಸ್ಥಳೀಯ ಘಟಕಗಳ ನೇತೃತ್ವದಲ್ಲಿ ಪ್ರಧಾನಿಯವರ ಜನ್ಮದಿನ ಆಚರಿಸಲಾಗಿದೆ. 160 ಮಂಡಲಗಳ ವ್ಯಾಪ್ತಿಯ 175 ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ರಾಜ್ಯದಾದ್ಯಂತ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ರಕ್ತದಾನದ ಜತೆಯಲ್ಲೇ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ. ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ, ಅನಾಥಾಶ್ರಮ, ವಿಶೇಷ ಮಕ್ಕಳ ವಸತಿ ಶಾಲೆಗಳಲ್ಲೂ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದರು.

ಪ್ರಧಾನಿಯವರ ಜನ್ಮದಿನದ ಅಂಗವಾಗಿ ಇಲ್ಲಿನ ಬೆಂಗಳೂರಿನ ಹಲವು ಸ್ಥಳಗಳಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿತ್ತು. ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಶೇಷಾದ್ರಿಪುರದಲ್ಲಿರುವ ಮನೋವಿಕಾಸ ಕೇಂದ್ರದಲ್ಲಿ ಮೋದಿಯವರ ಜನ್ಮದಿನ ಆಚರಣೆಯಲ್ಲಿ ಪಾಲ್ಗೊಂಡರು. ಕೇಕ್‌ ಕತ್ತರಿಸಿ, ಮಕ್ಕಳಿಗೆ ಹಣ್ಣು ವಿತರಿಸಿ ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT