ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಚ್ಚಿ–ಮಂಗಳೂರು ನೈಸರ್ಗಿಕ ಅನಿಲ ಪೈಪ್‌ಲೈನ್‌ಗೆ ನಾಳೆ ಮೋದಿ ಚಾಲನೆ

Last Updated 3 ಜನವರಿ 2021, 14:04 IST
ಅಕ್ಷರ ಗಾತ್ರ

ನವದೆಹಲಿ: ಕೊಚ್ಚಿ–ಮಂಗಳೂರು ನೈಸರ್ಗಿಕ ಅನಿಲ ಪೈಪ್‌ಲೈನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಮಂಗಳವಾರ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಈ ಕಾರ್ಯಕ್ರಮವು ‘ಒಂದು ರಾಷ್ಟ್ರ, ಒಂದು ಅನಿಲ ಗ್ರಿಡ್’ ರಚನೆಗೆ ಮಹತ್ವದ ಮೈಲಿಗಲ್ಲಾಗಿದೆ ಎಂದು ಪ್ರಧಾನಿ ಕಚೇರಿ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.

450 ಕಿ.ಮೀ. ಉದ್ದದ ನೈಸರ್ಗಿಕ ಅನಿಲ ಪೈಪ್‌ಲೈನ್ ಅನ್ನು ಗೇಲ್ ಇಂಡಿಯಾ ಲಿಮಿಟೆಡ್ ನಿರ್ಮಿಸಿದೆ. ಈ ಯೋಜನೆಯ ಒಟ್ಟು ವೆಚ್ಚ ಸುಮಾರು ₹ 3 ಸಾವಿರ ಕೋಟಿ ಆಗಿದೆ.

ಪೈಪ್‌ಲೈನ್ ಮಾರ್ಗವು ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಘನ ಮೀಟರ್ ಸಾಗಣೆಯ ಸಾಮರ್ಥ್ಯವನ್ನು ಹೊಂದಿದೆ. ಕೊಚ್ಚಿಯ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ರೆಗಾಸಿಫಿಕೇಶನ್ ಟರ್ಮಿನಲ್‌ನಿಂದ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸಲಾಗುತ್ತದೆ. ಇದು ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೊಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ ಎಂದು ಪ್ರಧಾನಿ ಕಚೇರಿಯ ಪ್ರಕಟಣೆಯು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT