ಮಂಗಳವಾರ, ಮಾರ್ಚ್ 21, 2023
30 °C

ಫೆ. 6ಕ್ಕೆ ಪ್ರಧಾನಿ ಮೋದಿ ಬೆಂಗಳೂರು, ತುಮಕೂರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 6ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆ. 6ರಂದು ಬೆಳಿಗ್ಗೆ ನಗರಕ್ಕೆ ಆಗಮಿಸುವ ಪ್ರಧಾನಿ, ಮಾದಾವರ ಸಮೀಪದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ‘ಇಂಡಿಯಾ ಎನರ್ಜಿ ವೀಕ್‌’ ಕಾರ್ಯಕ್ರಮ ಉದ್ಘಾಟಿಸುವರು.

ನಂತರ ಪ್ರಧಾನಿಯವರು ತುಮಕೂರು ಜಿಲ್ಲಾ ಪ್ರವಾಸಕ್ಕೆ ತೆರಳುವರು. ಅಲ್ಲಿನ ಗುಬ್ಬಿ ತಾಲ್ಲೂಕಿನ ಬಿದೇರಹಳ್ಳಿಯಲ್ಲಿ ಎಚ್‌ಎಎಲ್‌ನ ಹೆಲಿಕಾಪ್ಟರ್‌ ಉತ್ಪಾದನಾ ಕಾರ್ಖಾನೆಯನ್ನು ಉದ್ಘಾಟಿಸುವರು. ಜಲಜೀವನ್‌ ಮಿಷನ್‌ ಯೋಜನೆಯಡಿ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಗಳ ಕಾಮಗಾರಿಗಳಿಗೆ ಅದೇ ಸ್ಥಳದಿಂದ ಭೂಮಿಪೂಜೆ ನೆರವೇರಿಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು