ಭಾನುವಾರ, ನವೆಂಬರ್ 28, 2021
21 °C

ಡಿ.6ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್‌ 6 ರಂದು ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ವಿವಿಧ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದರು. 

ಪ್ರಧಾನ ಮಂತ್ರಿಯವರು ಡಿ.6 ಕ್ಕೆ ಉದ್ಘಾಟನೆಗೆ ಬರಲು ಒಪ್ಪಿಕೊಂಡಿರುವುದರಿಂದ ಅದಕ್ಕಾಗಿ ನಡೆಸಿರುವ ತಯಾರಿಯ ಬಗ್ಗೆ ಬೊಮ್ಮಾಯಿ ವಿವರ ಪಡೆದರು.  ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಸತಿ ಸಚಿವ ವಿ.ಸೋಮಣ್ಣ, ತೋಟಗಾರಿಕೆ ಸಚಿವ ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ್‌ ಗುಪ್ತ, ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು