ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ವಿದೇಶಗಳು ನೆರವಿಗೆ ಬರಲು ಮೋದಿಯವರ ಲಸಿಕೆ ಮೈತ್ರಿ ಕಾರಣ ಎಂದ ಬಿಜೆಪಿ

Last Updated 9 ಮೇ 2021, 16:42 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್–19 ಎರಡನೇ ಅಲೆಯ ಸಂದರ್ಭದಲ್ಲಿ ವಿದೇಶಗಳು ಭಾರತದ ನೆರವಿಗೆ ಬರಲು ಪ್ರಧಾನಿ ನರೇಂದ್ರ ಮೋದಿಯವರ ಲಸಿಕೆ ಮೈತ್ರಿ ಕಾರಣ ಎಂದು ಬಿಜೆಪಿಯ ಕರ್ನಾಟಕ ಘಟಕ ಪ್ರತಿಪಾದಿಸಿದೆ.

‘ಮೋದಿಯವರು ಲಸಿಕೆ ಮೈತ್ರಿಯ ಅಡಿ ವಿಶ್ವದ ಅನೇಕ ದೇಶಗಳಿಗೆ ಲಸಿಕೆಗಳನ್ನು ಕಳುಹಿಸಿಕೊಟ್ಟರು. ಇಂದು ಆ ದೇಶಗಳು ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ದೇಶಕ್ಕೆ ನೆರವಾಗುತ್ತಿವೆ. ಆಮ್ಲಜನಕ, ವೆಂಟಿಲೇಟರ್‌ಗಳು, ಔಷಧ ಹಾಗೂ ಇತರ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಡುತ್ತಿವೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವಾಗ ಲಸಿಕೆ ರಫ್ತು ಮಾಡುವುದಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ನಮ್ಮ ದೇಶದ ಜನರು ಸಾಯುತ್ತಿರುವಾಗ ತನ್ನ ವರ್ಚಸ್ಸು ಹೆಚ್ಚಿಸಿಕೊಳ್ಳುವುದಕ್ಕಾಗಿ ಕೇಂದ್ರ ಸರ್ಕಾರವು ಲಸಿಕೆಯನ್ನು ಬೇರೆ ದೇಶಗಳಿಗೆ ಮಾರಾಟ ಮಾಡುವುದು ಗಂಭೀರ ಅಪರಾಧ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT