ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ಐದು ಯೋಜನೆಗಳಿಗೆ ಪ್ರಧಾನಿ ಮೆಚ್ಚುಗೆ: ಸಿಎಂ ಬೊಮ್ಮಾಯಿ

Last Updated 25 ಜುಲೈ 2022, 2:50 IST
ಅಕ್ಷರ ಗಾತ್ರ

ನವದೆಹಲಿ: ‘ಕರ್ನಾಟಕ ಸರ್ಕಾರ ಜಾರಿಗೊಳಿಸಿದ ಐದಾರು ಯೋಜನೆ ಗಳ ಬಗ್ಗೆ ಬಿಜೆಪಿ ಮುಖ್ಯಮಂತ್ರಿಗಳ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಪಕ್ಷದ ಮುಖ್ಯ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಬೊಮ್ಮಾಯಿ, ‘ಬಿಜೆಪಿ ಮುಖ್ಯಮಂತ್ರಿಗಳ ಸಭೆ ನಿಯಮಿತವಾಗಿ ನಡೆಯುತ್ತದೆ. ಕೇಂದ್ರ ಸರ್ಕಾರದ ಪ್ರಾಯೋಜಿತ ಕಲ್ಯಾಣ ಯೋಜನೆಗಳ ಕುರಿತು ಚರ್ಚಿಸ ಲಾಗುತ್ತದೆ. ಮುಂದಿನ ಸಭೆ ಅಕ್ಟೋಬರ್‌ನಲ್ಲಿ ನಡೆಯಲಿದೆ’ ಎಂದರು.

‘ಕಿಸಾನ್‌ ಸಮ್ಮಾನ್‌ ಯೋಜನೆ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ, ಐಟಿಐ ಮೇಲ್ದರ್ಜೆಗೆ ಏರಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಎಲ್ಲ ಯೋಜನೆಗಳ ಬಗ್ಗೆ ಪ್ರಧಾನಿ ಅವರು ಮಾಹಿತಿ ಪಡೆದರು’ ಎಂದರು.

‘ಸೋಮವಾರ ಬೆಳಿಗ್ಗೆ ನಡೆಯುವ ರಾಷ್ಟ್ರಪತಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುತ್ತೇನೆ. ಬಳಿಕ ಕ್ರೀಡಾ ಸಚಿವರು, ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು, ಅರಣ್ಯ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಾಗುವುದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT