ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಸಿಕೆ ವಿತರಣೆಗೆ ಪ್ರಧಾನಿ ಚಾಲನೆ: ಡಾ.ಕೆ. ಸುಧಾಕರ್‌

Last Updated 9 ಜನವರಿ 2021, 8:26 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ವ್ಯಾಕ್ಸಿನ್ ಯಾವಾಗ ಬರುತ್ತದೆ, ಯಾವಾಗ ಹಂಚಿಕೆಯಾಗಲಿದೆ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 4 ಗಂಟೆಗೆ ಉತ್ತರ ನೀಡುತ್ತಾರೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಾಜ್ಯಕ್ಕೆ ಶೀಘ್ರದಲ್ಲೇ 13.90 ಲಕ್ಷ ಲಸಿಕೆ ಬರಲಿದೆ. ಹಾಗೂ ರಾಜ್ಯದಲ್ಲಿ ಬೆಂಗಳೂರು- ಹುಬ್ಬಳ್ಳಿಯ ತಲಾ ಒಂದು ಆಸ್ಪತ್ರೆಯಲ್ಲಿ ಪ್ರಧಾನಿ ಮೋದಿ ಲಸಿಕೆ ವಿತರಣೆಗೆ ದೆಹಲಿಯಿಂದಲೇ ಚಾಲನೆ ನೀಡಲಿದ್ದಾರೆ. ದೇಶದಲ್ಲಿ ಒಟ್ಟು 5,000 ಲಸಿಕೆ ಹಂಚಿಕೆ ಕೇಂದ್ರಗಳನ್ನು ಗುರುತಿಸಿದ್ದು, ಕರ್ನಾಟಕದಲ್ಲಿ 235 ಕೇಂದ್ರಗಳನ್ನು ನಿರ್ಮಿಸಲಾಗಿದೆ’ ಎಂದರು.

‘ಕೇಂದ್ರ ಸರ್ಕಾರದ ಸಚಿವಾಲಯದ ಕಾರ್ಯದರ್ಶಿಗಳು ಇಂದು ವಿಡಿಯೊ ಸಂವಾದದ ಮೂಲಕ ದೇಶದ ಎಲ್ಲ ಆರೋಗ್ಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು, ಅಧಿಕಾರಿಗಳು ಸೇರಿದಂತೆ ಇತರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ’ ಎಂದರು.

‘ಲಸಿಕೆ ಸರಬರಾಜು, ಸಂಗ್ರಹಣೆ, ನೀಡುವಿಕೆ ಬಗ್ಗೆ ಸಂವಾದ ನಡೆಯುತ್ತಿದೆ. ಸೋಮವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರೊಂದಿಗೆ ಪ್ರಧಾನಿ ಮೋದಿ ವಿಡಿಯೊ ಸಂವಾದ ನಡೆಸಲಿದ್ದಾರೆ. ಲಸಿಕೆ ವಿಚಾರವಾಗಿ ಮಾತನಾಡುತ್ತಾರೆ’ ಎಂದರು.

‘ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಬೇಡ. ಎಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿಲ್ಲ. ಎಲ್ಲ ಹಕ್ಕಿಗಳ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದೂ ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT