ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಬಿಜೆಪಿ ಗೆಲುವಿಗೆ ಮೋದಿ ಜನಸ್ನೇಹಿ ನೀತಿಗಳು ಕಾರಣ: ಜೆ.ಪಿ.ನಡ್ಡಾ

Last Updated 7 ಸೆಪ್ಟೆಂಬರ್ 2021, 9:35 IST
ಅಕ್ಷರ ಗಾತ್ರ

ನವದೆಹಲಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿ ಜಯಗಳಿಸಲು ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿರುವ ಜನಸ್ನೇಹಿ ನೀತಿಗಳೇ ಕಾರಣ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಜನರಿಗೆ ಧನ್ಯವಾದ ಸಮರ್ಪಿಸಿ ಟ್ವೀಟ್ ಮಾಡಿರುವ ಅವರು, ‘ಹುಬ್ಬಳ್ಳಿ– ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಮೇಲೆ ನಂಬಿಕೆ ಇರಿಸಿದ ಜನರಿಗೆ ಧನ್ಯವಾದಗಳು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕಾರ್ಯಕರ್ತರಿಗೆ ಅಭಿನಂದನೆಗಳು’ ಎಂದು ಉಲ್ಲೇಖಿಸಿದ್ದಾರೆ.

‘ಜನಸ್ನೇಹಿ ನೀತಿಗಳ ಮೂಲಕ ಬೆಳಗಾವಿ ಪಾಲಿಕೆಯಲ್ಲಿ ಮೊದಲ ಬಾರಿ ನಾವು ಗೆಲ್ಲುವುದಕ್ಕೆ ಕಾರಣರಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಹುಬ್ಬಳ್ಳಿ– ಧಾರವಾಡ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವುದು ಹಾಗೂ ಕಲಬುರ್ಗಿಯಲ್ಲಿ ಉತ್ತಮ ಸಾಧನೆ ತೋರಿರುವುದು ನಮಗೆ ಹೆಮ್ಮೆಯ ವಿಷಯ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದ ಮೇಲೆ ಕನ್ನಡಿಗರು ನಂಬಿಕೆ ಇಟ್ಟಿರುವುದನ್ನು ಮತ್ತೆ ಸಾಬೀತುಪಡಿಸಿದೆ. ಬೊಮ್ಮಾಯಿ ಮತ್ತು ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಹುಬ್ಬಳ್ಳಿ– ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಹಿನ್ನಡೆ ಅನುಭವಿಸಿವೆ. ಹುಬ್ಬಳ್ಳಿ– ಧಾರವಾಡ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಬೆಳಗಾವಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದ್ದು, ಯಾವುದೇ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT