ಪಿ.ಎಂ.ಪೆಮ್ಮಯ್ಯ ನಿಧನ

ಬೆಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿದ್ದ ಪಿ.ಎಂ.ಪೆಮ್ಮಯ್ಯ (72) ಅವರು ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ ನಿಧನರಾದರು.
ಅವರು ದೀರ್ಘಕಾಲದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಪೊಲೀಸ್ ಇಲಾಖೆಯಲ್ಲಿ ಎಸ್‌ಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಅವರು ಜೆ.ಪಿ.ನಗರದಲ್ಲಿ ವಾಸವಿದ್ದರು.
ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯ ಸ್ವಗ್ರಾಮ ಹಾಲುಗುಂದದಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.