ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ: ಸಂತ್ರಸ್ತೆ ಹೇಳಿಕೆ ಪರಿಗಣಿಸಿ ಜಾಮೀನು ನೀಡಲಾಗದು: ಹೈಕೋರ್ಟ್

Last Updated 21 ಜೂನ್ 2021, 22:47 IST
ಅಕ್ಷರ ಗಾತ್ರ

ಬೆಂಗಳೂರು: ಅಪಹರಣ ಮತ್ತು ಅತ್ಯಾಚಾರ ಆರೋಪದಲ್ಲಿ ಪೊಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿ ಜತೆ ಮದುವೆ ಆಗುವುದಾಗಿ ಸಂತ್ರಸ್ತೆ ಸ್ವಯಂ ಪ್ರೇರಣಿಯಿಂದ ಅಫಿಡವಿಟ್ ಸಲ್ಲಿಸಿದ್ದರೂ ಆರೋಪಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.

‘15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ’ ಎಂದು ಆರೋಪಿಸಿ ಬಾಲಕಿಯ ತಾಯಿ ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಿ ಪೊಕ್ಸೊ ಮತ್ತು ಬಾಲ್ಯ ವಿವಾಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

‘ಅತ್ಯಾಚಾರ ಆರೋಪಿಗೆ ಜಾಮೀನು ನೀಡಲು ಆಕ್ಷೇಪಣೆ ಇಲ್ಲ’ ಎಂದು ಅಫಿಡವಿಟ್ ಸಲ್ಲಿಸಲು ಸಿಆರ್‌ಪಿಸಿ 164 ಅಡಿಯಲ್ಲಿಸಂತ್ರಸ್ತೆಗೆ ಅವಕಾಶ ಇದೆ. ಆದರೆ, ಬಾಲಕಿ ಸಲ್ಲಿಸುವ ಅಫಿಡವಿಟ್ ಪರಿಗಣಿಸಲು ಆಗುವುದಿಲ್ಲ. ಸಾರ್ವಜನಿಕ ಹಿತದೃಷ್ಟಿ ಮತ್ತು ಈ ರೀತಿಯ ಅಪರಾಧಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ನ್ಯಾಯಾಲಯ ಕಠಿಣ ನಿಲುವು ತಾಳಬೇಕಾಗುತ್ತದೆ’ ಎಂದು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

‘ಈ ಇಬ್ಬರು ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ’ ಎಂದು ಆರೋಪಿ ಪರ ವಕೀಲರು ತಿಳಿಸಿದರು. ‘ಮದುವೆ ಪ್ರಮಾಣಪತ್ರದಲ್ಲಿ ಸಂತ್ರಸ್ತೆಯ ವಯಸ್ಸನ್ನು 19 ಎಂದು ನಮೂದಿಸಲಾಗಿದೆ. ಅಲ್ಲದೇ, ಆರೋಪಿಗೆ ಇದಕ್ಕೂ ಮೊದಲೇ ಬೇರೊಬ್ಬ ಮಹಿಳೆ ಜತೆ ಮದುವೆಯಾಗಿದೆ. ಎರಡನೇ ಮದುವೆಯಾಗಲು ಮೊಹಮ್ಮದನ್ ಕಾನೂನಿನಲ್ಲಿ ಅವಕಾಶ ಇದ್ದರೂ, ವಿಶೇಷ ಕಾಯ್ದೆಯಾದ ಪೊಕ್ಸೊ, ಬಾಲ್ಯ ವಿವಾಹ ಕಾಯ್ದೆಯನ್ನು ಮೀರಲು ಆಗುವುದಿಲ್ಲ’ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT