ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಕ್ಸೊ ಪ್ರಕರಣ | ಶಿಕ್ಷೆ ಇಳಿಕೆಗೆ ಅವಕಾಶವಿಲ್ಲ: ಹೈಕೋರ್ಟ್

Last Updated 19 ಜನವರಿ 2023, 23:03 IST
ಅಕ್ಷರ ಗಾತ್ರ

ಬೆಂಗಳೂರು: ‘ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಗಳು ಪೊಕ್ಸೊ ಕಾಯ್ದೆ- 2012ರ ಅಡಿಯಲ್ಲಿ ಅಪರಾಧ ಕೃತ್ಯಕ್ಕೆ ವಿಧಿಸಲಾಗುವ ನಿಗದಿತ ಪ್ರಮಾಣದ ಶಿಕ್ಷೆಯನ್ನು ಕಡಿಮೆ ಮಾಡುವ ಯಾವುದೇ ಅಧಿಕಾರ ಹೊಂದಿಲ್ಲ’ ಎಂದು ಹೈಕೋರ್ಟ್ ಆದೇಶಿಸಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂ ಕಿನ ಕಾಲವಾಡಿ ಗ್ರಾಮದ ಶೇಖ್ ರೌಫ್ ಎಂಬ ಆರೋಪಿಗೆ ಸ್ಥಳೀಯ ‍ಪೊಕ್ಸೊ ವಿಶೇಷ ನ್ಯಾಯಾಲಯ ಏಳು ವರ್ಷಗಳಿಗೆ ಬದಲಾಗಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಭಾಲ್ಕಿ ಟೌನ್ ಠಾಣಾ ಪೊಲೀಸರ ಪರ ಪ್ರಾಸಿಕ್ಯೂಷನ್‌ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಆರೋಪಿ ಶೇಖ್ ರೌಫ್‌ನನ್ನು ದೋಷಿಯಾಗಿ ತೀರ್ಮಾನಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿರುವ ನ್ಯಾಯಪೀಠ, ಅಪರಾಧಿಗೆ ವಿಧಿಸಲಾಗಿದ್ದ ಐದು ವರ್ಷಗಳ ಜೈಲು ಶಿಕ್ಷೆಯನ್ನು ಏಳು ವರ್ಷಕ್ಕೆ ಹೆಚ್ಚಿಸಿ, ‘ಈ ಆದೇಶದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯ ಕಂಡುಬರುತ್ತಿಲ್ಲ’ ಎಂದು ತಿಳಿಸಿದೆ.

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ಶೇಖರ್ ರೌಫ್‌ಗೆ ವಿಶೇಷ ನ್ಯಾಯಾಲಯ, ಐದು ವರ್ಷ ಸಾಧಾ ರಣಾ ಜೈಲು ಶಿಕ್ಷೆ ವಿಧಿಸಿ 2015ರ ಸೆಪ್ಟೆಂಬರ್ 7ರಂದು ಆದೇಶಿಸಿತ್ತು. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT