ಮಂಗಳವಾರ, ಅಕ್ಟೋಬರ್ 26, 2021
21 °C

ಎಎಸ್‌ಐ ಬಡ್ತಿ: ಕಡ್ಡಾಯ ಸೇವಾವಧಿ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ಗಳಿಗೆ (ಎಎಸ್‌ಐ) ಮುಂದಿನ ಶ್ರೇಣಿಗೆ ಬಡ್ತಿ ಪಡೆಯಲು ಇದ್ದ ಐದು ವರ್ಷಗಳ ಕನಿಷ್ಠ ಸೇವಾ ಅವಧಿಯನ್ನುನಾಲ್ಕು ವರ್ಷಗಳಿಗೆ ಇಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇದಕ್ಕಾಗಿ ಪೊಲೀಸ್‌ ಲಿಪಿಕ ಸೇವೆ ನೇಮಕ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

ಬಡ್ತಿಗೆ ಅರ್ಹ ಅಭ್ಯರ್ಥಿಗಳು ಇಲ್ಲದಾಗ ಉಳಿದವರಿಗೆ ಬಡ್ತಿ ನೀಡಲು ಎಂಟು ವರ್ಷಗಳ ಕಡ್ಡಾಯ ಸೇವೆಯನ್ನು ಐದು ವರ್ಷಗಳಿಗೆ ಇಳಿಸಲಾಗಿತ್ತು. ಅದನ್ನು ಈಗ ನಾಲ್ಕು ವರ್ಷಗಳಿಗೆ ಇಳಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು