ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಪೊಲೀಸ್ ವಶಕ್ಕೆ

ಮಾರ್ಚ್ 24ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದ್ದ ಚಂದ್ರಶೇಖರ್‌
Last Updated 21 ಮಾರ್ಚ್ 2023, 18:37 IST
ಅಕ್ಷರ ಗಾತ್ರ

ಬೆಂಗಳೂರು: ವೇತನ ಪರಿಷ್ಕರಣೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ, ಮಾರ್ಚ್ 24ರಿಂದ ಅನಿರ್ದಿಷ್ಟಾವಧಿ ತನಕ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಅವರನ್ನು ಮಂಗಳವಾರ ತಡರಾತ್ರಿ ವಿಲ್ಸನ್ ಗಾರ್ಡನ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಷ್ಕರಕ್ಕೆ ಪೂರ್ವಭಾವಿಯಾಗಿ ಕೆಎಸ್‌ಆರ್‌ಟಿಸಿ ಕೇಂದ್ರ ‌ಕಚೇರಿ ಬಳಿ ಮಂಗಳವಾರ ಸಂಜೆಯಿಂದಲೇ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿತ್ತು. ಚಾಲಕರು ಹಾಗೂ ನಿರ್ವಾಹಕರು ಈ ಸತ್ಯಾಗ್ರಹದಲ್ಲಿ ‌ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ನಿಗಮದ ಅಧಿಕಾರಿಗಳ ಜತೆಗೆ ನಡೆದ ಸಂಧಾನ ಸಭೆಯು ವಿಫಲವಾಗಿತ್ತು.

ಯಾವುದೇ ಕಾರಣಕ್ಕೂ ಜಗ್ಗುವುದಿಲ್ಲ.‌ ಬೇಡಿಕೆ ಈಡೇರುವ ತನಕ ಮುಷ್ಕರ ನಡೆಸುತ್ತೇವೆ. ಬಸ್ ಓಡಿಸುವುದಿಲ್ಲ. ಜಂಟಿ ಕ್ರಿಯಾ ಸಮಿತಿಯವರು ಸರ್ಕಾರದ ಜತೆಗೆ ಕೈಜೋಡಿಸಿ ಅನ್ಯಾಯ ಮಾಡಿದ್ದಾರೆ ಎಂದು ಚಂದ್ರು ಆರೋಪಿಸಿದ್ದರು.

ಪೊಲೀಸರು ಬಲವಂತವಾಗಿ ಚಂದ್ರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸರ್ಕಾರವು ಹೋರಾಟ ಹತ್ತಿಕ್ಕುತ್ತಿದೆ ಎಂದು ಕೂಟದ ಪದಾಧಿಕಾರಿಗಳು ದೂರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT