ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲ ಜಿಲ್ಲೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ’

ಗೃಹ ಸಚಿವ ಬಸವರಾಜ ಬೊಮ್ಮಾಯಿ
Last Updated 2 ಏಪ್ರಿಲ್ 2021, 19:34 IST
ಅಕ್ಷರ ಗಾತ್ರ

ಬೆಂಗಳೂರು:‘ರಾಜ್ಯದಲ್ಲಿ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನ ನೀಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಲಾಗುವುದು’ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಪೊಲೀಸ್ ಇಲಾಖೆಯು ಕೋರಮಂಗಲದ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಹಾಗೂಮುಖ್ಯಮಂತ್ರಿ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬ್ಯಾಂಕುಗಳಲ್ಲಿ ನಡೆಯುವ ವಂಚನೆಗಳನ್ನು ಆರ್‌ಬಿಐ ನೆರವಿನಿಂದ ಪತ್ತೆ ಮಾಡಿದ್ದೇವೆ.ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿದ್ದ ಮಾದಕ ವಸ್ತುಗಳ ಮಾರಾಟ ಜಾಲಗಳನ್ನು ಪತ್ತೆ ಹಚ್ಚಿ,ಡ್ರಗ್ಸ್‌ ವಿರುದ್ಧ ಸಮರ ಸಾರಿದ್ದೇವೆ.ರಾಜ್ಯ ಪೊಲೀಸರು ಹಲವಾರು ಪ್ರಕರಣಗಳಲ್ಲಿ ತಮ್ಮ ಕಾರ್ಯಗಳಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಂಕೀರ್ಣ ಪ್ರಕರಣಗಳನ್ನು ಬಗೆಹರಿಸಿದ್ದಾರೆ’ ಎಂದರು.

‘ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಇದಕ್ಕಾಗಿಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆ (ಕೆಎಸ್‌ಆರ್‌ಪಿ) ವತಿಯಿಂದ ಕಾಲೇಜು ವಿದ್ಯಾರ್ಥಿನಿಯರಿಗೆ ‘ಸೆಲ್ಫ್ ಡಿಫೆನ್ಸ್’ (ಸ್ವಯಂ ರಕ್ಷಣೆ) ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

‘ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ವೇಳೆ ಹಲವರಿಂದ ಅಡೆತಡೆಗಳು ಬರುತ್ತವೆ. ಅವುಗಳನ್ನು ಮೆಟ್ಟಿನಿಂತು, ಪೊಲೀಸರು ನ್ಯಾಯ ಸಮ್ಮತವಾದ ತನಿಖೆ ಮೂಲಕ ಟೀಕೆ ಟಿಪ್ಪಣಿಗಳಿಗೆ ಉತ್ತರಿಸಬೇಕು’ ಎಂದರು.

ಕರ್ತವ್ಯದಲ್ಲಿ ಉತ್ತಮ ಸಾಧನೆಗೈದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT