ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಯುವಕನಿಗೆ ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಅರ್ಜುನ್ ಅವರಿಗೆ ಜಾಮೀನು ನೀಡಲು ನಗರದ ಒಂದನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಸೋಮವಾರ ನಿರಾಕರಿಸಿದೆ.
ನ್ಯಾಯಾಧೀಶೆ ಬಿ. ಪುಷ್ಪಾಂಜಲಿ ಅವರು ಅರ್ಜಿ ವಿಚಾರಣೆ ನಡೆಸಿದರು. ಕೆಲ ದಿನಗಳ ಹಿಂದೆ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು.
ಮೂಡಿಗೆರೆ ತಾಲ್ಲೂಕಿನ ಕಿರಗುಂದದ ಪುನೀತ್ ಎಂಬವರಿಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ್ದಾರೆ ಎಂಬ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್‌ನನ್ನು ಬೆಂಗಳೂರಿನಲ್ಲಿ ಸೆ.1ರಂದು ಸಿಐಡಿ ಪೊಲೀಸರು ಬಂಧಿಸಿ, ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.