ಶುಕ್ರವಾರ, ಜುಲೈ 1, 2022
25 °C

ಪಿಎಸ್ಐ ನೇಮಕಾತಿ ಅಕ್ರಮ: ಪೊಲೀಸ್ ನೇಮಕಾತಿ‌ ಮಂಡಳಿ ಎಡಿಜಿಪಿ ಅಮೃತ್ ಪಾಲ್ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ‌ ನಡೆದ ಅಕ್ರಮಗಳ ಒಳಸುಳಿಗಳು ಹೊರಬರುತ್ತಿರುವ ಬೆನ್ನಲ್ಲೆ, ಪೊಲೀಸ್ ನೇಮಕಾತಿ‌ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 

ಅಪರಾಧ ಮತ್ತು ತಾಂತ್ರಿಕ ಸೇವೆಗಳು ಘಟಕದ ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. 

ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನಿಯೋಜಿಸಲಾಗಿದೆ. 

545 ಪಿಎಸ್ಐ ಹುದ್ದೆಗಳ‌ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಖಚಿತವಾಗುತ್ತಿದ್ದಂತೆ ಅಮೃತ್ ಪಾಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು. 

'ಅಕ್ರಮದ ಬಗ್ಗೆ ಕೆಲವು ಅಭ್ಯರ್ಥಿಗಳು ನೇರವಾಗಿ ದೂರು ನೀಡಿದ್ದರೂ ಪಾಲ್ ಅವರು ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೆ, ಇಡೀ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳೂ ಕೂಡಾ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಕೆಲವು ಅಧಿಕಾರಿಗಳ ವರ್ಗಾವಣೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ' ಎಂದು ಗೃಹ ಇಲಾಖೆಯ ಮೂಲಗಳು ಹೇಳಿವೆ.

ಇದನ್ನೂ ಓದಿ.. ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತೊಬ್ಬ ಆರೋಪಿ ಎನ್.ವಿ. ಸುನೀಲ ಕುಮಾರ ಬಂಧನ
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು