ಬುಧವಾರ, ಮಾರ್ಚ್ 29, 2023
23 °C

ಕೊಡಗು ಗಡಿ ಭಾಗದಲ್ಲಿ ತೀವ್ರ ನಿಗಾ: ಆರಗ ಜ್ಞಾನೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವುದಕ್ಕಾಗಿ ತೀವ್ರ ನಿಗಾ ಇಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸಭೆಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್‌ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ಕೆಲವರು ಕೊಡಗು ಜಿಲ್ಲೆಯಲ್ಲಿ ಅಪರಾಧ ಕೃತ್ಯ ಎಸಗಿ ಕೇರಳಕ್ಕೆ ಪರಾರಿಯಾಗುತ್ತಾರೆ. ಅಂತಹ ಪ್ರಕರಣಗಳನ್ನು ತಡೆಯಲು ಬಿಗಿ ಕಣ್ಗಾವಲು ಇರಿಸಲಾಗುವುದು’ ಎಂದರು.

ಕೊಡಗು ಜಿಲ್ಲೆಯಲ್ಲಿ 2021ರಲ್ಲಿ 1,684 ಅಪರಾಧ ಪ್ರಕರಣಗಳು ದಾಖಲಾಗಿವೆ. 1,617 ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಮಾಡಲಾಗಿದೆ. 2022ರ ಆಗಸ್ಟ್‌ ಅಂತ್ಯದವರೆಗೆ 1,122 ಪ್ರಕರಣಗಳು ದಾಖಲಾಗಿದ್ದು, 870 ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಮಾಡಲಾಗಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್‌ ಇಲಾಖೆಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂಬ ಅಪ್ಪಚ್ಚು ರಂಜನ್‌ ಬೇಡಿಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಕೊಡಗು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ 95 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆಯಿಂದಲೂ 10 ಕ್ಯಾಮೆರಾ ಅಳವಡಿಸಲಾಗಿದೆ. ಹೆಚ್ಚಿನ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಕುರಿತು ಪರಿಶೀಲಿಸಿ, ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಜಿಲ್ಲಾ ಖನಿಜ ನಿಧಿಯ ಅನುದಾನ ಬಳಸಿಕೊಂಡು ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್‌ ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು