ಸೋಮವಾರ, ಡಿಸೆಂಬರ್ 5, 2022
22 °C

ರಾಜಕೀಯ ರಣರಂಗದಲ್ಲೇ ರಾಜಕೀಯ ಕದನ ನಡೆಸಬೇಕು: ಇಡಿ ವಿಚಾರಣೆ ನಡುವೆ ಡಿಕೆಶಿ ಟ್ವೀಟ್

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ (ಕೆಪಿಸಿಸಿ) ಡಿ.ಕೆ ಶಿವಕುಮಾರ್‌ ಅವರು ಶುಕ್ರವಾರ ಮಾರ್ಮಿಕವಾಗಿ ಟ್ವೀಟ್‌ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಡಿ.ಕೆ ಶಿವಕುಮಾರ್‌ ಶುಕ್ರವಾರ ಹಾಜರಾಗಿದ್ದಾರೆ. ಈ ಮಧ್ಯೆ ಅವರು ಈ ಟ್ವೀಟ್‌ ಮಾಡಿದ್ದಾರೆ.

‘ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. ಬಿಜೆಪಿ ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ಇ.ಡಿ ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗೆ ಅರಿವಾಗಬೇಕಿದೆ’ ಎಂದು ಅವರು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸದ್ಯ, ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ಹೊಣೆ ಹೊತ್ತಿರುವ ಶಿವಕುಮಾರ್, ಗುರುವಾರ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು