ಭಾನುವಾರ, ಮೇ 16, 2021
22 °C

ಜಾಹೀರಾತಿನಲ್ಲಿ ಜನಪ್ರತಿನಿಧಿ ಹೆಸರು, ಚಿತ್ರ: ಹೈಕೋರ್ಟ್ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿನ ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಹೆಸರುಗಳು ಮತ್ತು ಭಾವಚಿತ್ರಗಳನ್ನು ತೆಗೆದುಹಾಕಬೇಕು ಎಂದು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.

ಸಾಮಾಜಿಕ ಕಾರ್ಯಕರ್ತ ಎಚ್.ಎಂ. ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಜೂ.7ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ತಿಳಿಸಿತು.

‘ಬಸ್‌ ನಿಲ್ದಾಣ, ಸಾರ್ವಜನಿಕ ಶೌಚಾಲಯ, ಕುಡಿಯುವ ನೀರಿನ ಘಟಕಗಳಲ್ಲಿನ ಜಾಹೀರಾತು ಮತ್ತು ಫಲಕಗಳಲ್ಲಿ ಇರುವ ಜನಪ್ರತಿನಿಧಿಗಳ ಹೆಸರು ಮತ್ತು ಭಾವಚಿತ್ರಗಳನ್ನು ತೆಗೆದುಹಾಕಬೇಕು ಎಂದು ಸುಪ್ರಿಂ ಕೋರ್ಟ್‌ 2020 ಮೇ 13ರಂದು ಆದೇಶಿಸಿದೆ. ಅದನ್ನು ಪಾಲಿಸುತ್ತಿಲ್ಲ. ಸರ್ಕಾರದ ಹಣದಲ್ಲಿ ಜನಪ್ರತಿನಿಧಗಳು ಅಗತ್ಯಕ್ಕಿಂತ ಹೆಚ್ಚು  ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ’ ಎಂದು ಅರ್ಜಿದಾರರು ದೂರಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು