ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ನಿರುದ್ಯೋಗಿ ರಾಹುಲ್ ಸಾವರ್ಕರ್ ಬಗ್ಗೆ ಮಾತನಾಡಿದ್ದು ಹಾಸ್ಯಾಸ್ಪದ: ಬಿಜೆಪಿ

Last Updated 18 ನವೆಂಬರ್ 2022, 9:25 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ನಾಯಕ ವಿ.ಡಿ.ಸಾವರ್ಕರ್‌ ಅವರು ವೀರ ಸಾವರ್ಕರ್‌ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಬಿಜೆಪಿ ಕಿಡಿಕಾರಿದೆ.

‘ಹಿಂದುತ್ವವಾದಿ ವಿ.ಡಿ.ಸಾವರ್ಕರ್‌ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಅಲ್ಲದೆ, ಕ್ಷಮಾದಾನ ಕೋರಿ ಪತ್ರವನ್ನೂ ಬರೆದಿದ್ದರು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದರು.

ರಾಹುಲ್ ಹೇಳಿಕೆ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಬೆಳೆದ ರಾಜಕೀಯ ನಿರುದ್ಯೋಗಿ ರಾಹುಲ್ ಗಾಂಧಿ ಅವರು ವೀರ ಸಾವರ್ಕರ್‌ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ’ ಎಂದು ವಾಗ್ದಾಳಿ ನಡೆಸಿದೆ.

‘ಕಠಿಣಾತಿ ಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್‌ ವೀರನಲ್ಲ ಎಂದಾದರೆ, ಅಪ್ರಬುದ್ಧ ನಡೆಗಳಿಂದ ನ್ಯಾಯಾಲಯದಿಂದ ಆಗಾಗ್ಗೆ ಛೀಮಾರಿ ಹಾಕಿಸಿಕೊಂಡು ಕ್ಷಮೆ ಕೇಳುವ ರಾಹುಲ್‌ ಗಾಂಧಿ ಏನು’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಸಾವರ್ಕರ್‌ ಅವರು ಅಂಡಮಾನ್‌ ಜೈಲು, 50 ವರ್ಷ ಜೀವಾವಧಿ ಶಿಕ್ಷೆ, ಹೆಗಲಲ್ಲಿ ಗಾಣ, ಏಕಾಂತ ವಾಸ, ಕಳಪೆ ಆಹಾರ ಪೂರೈಕೆ. ನೆಹರೂ - ಪಂಜಾಬಿನ ನಭಾ ಜೈಲಿನಲ್ಲಿ ಕೇವಲ 2 ವರ್ಷ ಶಿಕ್ಷೆ. ಜೈಲಿನೊಳಗೆ ಸಕಲ ವ್ಯವಸ್ಥೆ. 2 ವರ್ಷದ ಶಿಕ್ಷೆ ಕ್ಷಮಾಪಣಾ ಪತ್ರದ ಮೂಲಕ ಕೆಲವೇ ದಿನದಲ್ಲಿ ಅಂತ್ಯ. ನೆಹರೂ ಪರಾಕ್ರಮಿಯೇ?’ ಎಂದು ಬಿಜೆಪಿ ಟೀಕಿಸಿದೆ.

‘ನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ರಾಹುಲ್‌ ಗಾಂಧಿ ಮೌನವೇಕೆ? ಕೇವಲ ಎರಡು ವರ್ಷದ ಶಿಕ್ಷೆಯನ್ನೇ ತಡೆದುಕೊಳ್ಳಲಾರದ ಕುಟುಂಬದವರು ಸ್ವಾತಂತ್ರ್ಯದ ಹೆಗ್ಗುರುತು, ಕಠಿಣಾತಿ ಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್‌ ಅವರ ವೀರತ್ವದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ’ ಎಂದು ಬಿಜೆಪಿ ಗುಡುಗಿದೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಮಾತನಾಡಿದ್ದ ರಾಹುಲ್, ಸಾವರ್ಕರ್‌ ಬರೆದಿದ್ದರು ಎನ್ನಲಾದ ಪತ್ರ ಪ್ರದರ್ಶಿಸಿದರು. ಪತ್ರದ ಕಡೆಯಲ್ಲಿ ‘ನಾನು ನಿಮ್ಮ ನಿಷ್ಠಾವಂತ ಸೇವಕ ಎಂದಿದೆ’ ಎಂದೂ ಓದಿದ್ದರು.

‌ಮಹಾರಾಷ್ಟ್ರದಲ್ಲಿ ‘ಭಾರತ್‌ ಜೋಡೊ’ ಯಾತ್ರೆಯ ಕಡೆಯ ದಿನದಂದು ಸುದ್ದಿಗಾರರ ಜೊತೆಗೆ ಮಾತನಾಡಿ, ದೇಶದಲ್ಲಿ ಪ್ರಸ್ತುತ ಮಹಾತ್ಮಗಾಂಧಿ ಮತ್ತು ವಿ.ಡಿ.ಸಾವರ್ಕರ್ ಅವರ ಚಿಂತನೆಗಳ ನಡುವೆ ಸಂಘರ್ಷವಿದೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT