ನ.30ರಂದು ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಗರದ ಹೊರವಲಯದ ಸಾದಹಳ್ಳಿ ಗೇಟ್ ಬಳಿಯ ಹೋಟೆಲ್‌ನಲ್ಲಿ ಸೋಮವಾರ (ನ. 30) ನಡೆಯಲಿದೆ.
ಸಭೆಯಲ್ಲಿ ಮಹಾರಾಷ್ಟ್ರ ಸಚಿವೆ ಯಶೋಮತಿ ಠಾಕೋರ್ ಅವರು ಎಐಸಿಸಿ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.
ಮುಂಬರುವ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳು ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧಿಸಿದಂತೆ ಸಭೆಯಲ್ಲಿ ವಿಚಾರ ವಿನಿಮಯ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ಎಲ್ಲ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.