ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ವಕ್ತಾರರಾಗಿ ಎ.ಎಸ್.ಪೊನ್ನಣ್ಣ ನೇಮಕ

Last Updated 23 ಸೆಪ್ಟೆಂಬರ್ 2020, 14:35 IST
ಅಕ್ಷರ ಗಾತ್ರ

ಮಡಿಕೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ವಕ್ತಾರರಾಗಿ ಹೈಕೋರ್ಟ್ ಹಿರಿಯ ವಕೀಲ, ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ ವಿಭಾಗದ ರಾಜ್ಯ ಅಧ್ಯಕ್ಷರಾದ ಕೊಡಗಿನ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರು ನೇಮಕಗೊಂಡಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪೊನ್ನಣ್ಣ ಅವರಿಗಿರುವ ಅನುಭವ, ತಿಳಿವಳಿಕೆ ಹಾಗೂ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯ ಪರಿಗಣಿಸಿ, ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ. ತಕ್ಷಣವೇ ಕಾರ್ಯ ಪ್ರವೃತ್ತರಾಗಲು ಅಧಿಕಾರ ನೀಡಲಾಗಿದೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ.

ಪೊನ್ನಣ್ಣ ಅವರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದರು. ದಿವಂಗತ ಎ.ಕೆ.ಸುಬ್ಬಯ್ಯ ಅವರ ಪುತ್ರ ಪೊನ್ನಣ್ಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT